ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್:ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಬಲವರ್ಧನೆ (Indian rupee | US dollar | Sensex)
Bookmark and Share Feedback Print
 
ಏಷ್ಯಾ ಕರೆನ್ಸಿಗಳ ಚೇತರಿಕೆಯಿಂದಾಗಿ,ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 18 ಪೈಸೆ ಏರಿಕೆಯಾಗಿ 45.29 ರೂಪಾಯಿಗಳಿಗೆ ತಲುಪಿದೆ.

ಏಷ್ಯಾ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ದುರ್ಬಲ ವಹಿವಾಟಿನಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 13 ಪೈಸೆ ಕುಸಿತ ಕಂಡು 45.47/48 ರೂಪಾಯಿಗಳಿಗೆ ತಲುಪಿತ್ತು. ಆದರೆ, ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 18 ಪೈಸೆ ಏರಿಕೆಯಾಗಿ 45.29 ರೂಪಾಯಿಗಳಿಗೆ ತಲುಪಿದೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 116.36 ಪಾಯಿಂಟ್‌ಗಳ ಚೇತರಿಕೆ ಕಂಡು 20,005.24 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ