ರಾಜ್ಯ ಸರಕಾರಗಳು ಈರುಳ್ಳಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಹಾಗೂ ವಾಣಿಜ್ಯ ಸಚಿವಾಲಯ ಈರುಳ್ಳಿ ಅಮದಿನ ವೇಗವನ್ನು ಹೆಚ್ಚಿಸಬೇಕು ಎಂದು ಕೇಂದ್ರ ಸರಕಾರ ಆದೇಶ ಹೊರಡಿಸಿದೆ.
ವೈಯಕ್ತಿಕವಾಗಿ ಪರಿಸ್ಥಿತಿಯ ಅವಲೋಕನೆಯಲ್ಲಿ ತೊಡಗಿರುವ ಸಂಪುಟ ಕಾರ್ಯದರ್ಶಿ ಕೆ.ಎಂ.ಚಂದ್ರಶೇಖರ್, ವಾಣಿಜ್ಯ ಕಾರ್ಯದರ್ಶಿ ರಾಹುಲ್ ಖುಲ್ಲರ್‌ಗೆ ಈರುಳ್ಳಿ ಅಮದಿನ ವೇಗವನ್ನು ಹೆಚ್ಚಿಸುವಂತೆ ಆದೇಶಿಸಿದ್ದಾರೆ.
ದೇಶದಾದ್ಯಂತ ತರಕಾರಿ ಮಾರುಕಟ್ಟೆಗಳಲ್ಲಿ ಈರುಳ್ಳಿ ದರ ಪ್ರತಿ ಕೆಜಿಗೆ 70-85 ರೂಪಾಯಿಗಳಿಗೆ ಏರಿಕೆಯಾಗಿರುವುದು ಕೇಂದ್ರ ಸರಕಾರವನ್ನು ಬೆಚ್ಚಿ ಬೀಳುವಂತೆ ಮಾಡಿದೆ.
ಈರುಳ್ಳಿ ಉತ್ಪಾದನೆಯಲ್ಲಿ ತೊಡಗಿರುವ ದೇಶದ ವಿವಿಧ ಭಾಗಗಳಿಂದ ಸರಬರಾಜಿಗೆ ಸುಗಮವಾಗುವಂತೆ ನೋಡಿಕೊಳ್ಳಲು ಹೆಚ್ಚಿನ ಆಸಕ್ತಿಯನ್ನು ವಹಿಸುವಂತೆ ರೈಲ್ವೆ ಅಡಳಿತ ಮಂಡಳಿ ಕೂಡಾ ಆದೇಶಿಸಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ರಾಜ್ಯ ಸರಕಾರಗಳು ಕೂಡಾ ಈರುಳ್ಳಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೋರಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.