ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್:ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಬಲವರ್ಧನೆ (Rupee | Forex | Dollar)
Bookmark and Share Feedback Print
 
ಏಷ್ಯಾ ಕರೆನ್ಸಿಗಳ ಚೇತರಿಕೆ ಹಾಗೂ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 9 ಪೈಸೆ ಏರಿಕೆಯಾಗಿ 45 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 13 ಪೈಸೆ ಏರಿಕೆ ಕಂಡು 45.09/10 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 9 ಪೈಸೆ ಏರಿಕೆಯಾಗಿ 45 ರೂಪಾಯಿಗಳಿಗೆ ತಲುಪಿದೆ.

ಡಾಲರ್ ಎದುರಿಗೆ ಏಷ್ಯಾ ಕರೆನ್ಸಿಗಳ ಚೇತರಿಕೆ ಹಾಗೂ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 57.10 ಪಾಯಿಂಟ್‌ಗಳ ಚೇತರಿಕೆ ಕಂಡು 20,072.90 ರೂಪಾಯಿಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರೂಪಾಯಿ, ಫಾರೆಕ್ಸ್, ಡಾಲರ್