ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಶೀಘ್ರದಲ್ಲಿ ಅಗತ್ಯ ವಸ್ತುಗಳ ದರ ಇಳಿಕೆ:ರಾಹುಲ್ ಗಾಂಧಿ (Rahul Gandhi | Tamil Nadu visit | Price rise)
Bookmark and Share Feedback Print
 
ಆಹಾರ ವಸ್ತುಗಳ ದರ ಏರಿಕೆ ನಿಯಂತ್ರಣಕ್ಕೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಸಂಸದ, ಸೋನಿಯಾ ಪುತ್ರ ರಾಹುಲ್ ಗಾಂಧಿ ಹೇಳಿದ್ದಾರೆ.

ಪ್ರಧಾನಿ ಮನಮೋಹನ್ ಸಿಂಗ್, ದರ ಏರಿಕೆ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ತೆಗೆದುಕೊಂಡಿದ್ದು, ಶೀಘ್ರದಲ್ಲಿ ದರಗಳಲ್ಲಿ ಇಳಿಕೆಯಾಗಲಿವೆ ಎಂದು ನಗರದಲ್ಲಿ ಕಾಂಗ್ರೆಸ್ ಸದಸ್ಯರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಸದಸ್ಯರು ಪಂಚಾಯಿತಿ ಮಟ್ಟದಲ್ಲಿ ಜನಪರ ಸೇವೆ ಸಲ್ಲಿಸಿ ಜನರಿಗೆ ಹತ್ತಿರವಾಗಬೇಕು ಎಂದು ರಾಹುಲ್ ಸಲಹೆ ನೀಡಿದರು.

ಜನಸಾಮಾನ್ಯರು ಅಗತ್ಯ ವಸ್ತುಗಳ ದರ ಏರಿಕೆ ಕುರಿತಂತೆ ಕಾಂಗ್ರೆಸ್ ಸರಕಾರ ಯಾವ ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸುತ್ತಿರುವ ಬಗ್ಗೆ ಕಾರ್ಯಕರ್ತರು ರಾಹುಲ್ ಗಮನ ಸೆಳೆದಾಗ, ಪ್ರಧಾನಿಯವರು ದರ ಏರಿಕೆ ಸಮಸ್ಯೆಯನ್ನು ಪರಿಹರಿಸಲಿದ್ದಾರೆ. ಪಂಚಾಯಿತಿ ಮಟ್ಟದಲ್ಲಿ ಪಕ್ಷವನ್ನು ಬೆಳೆಸುವ ಬಗ್ಗೆ ನೀವು ಕಾರ್ಯೋನ್ಮುಖರಾಗಿ ಎಂದು ಕರೆ ನೀಡಿದರು.

ಇದಕ್ಕಿಂತ ಮೊದಲು, ತಮಿಳುನಾಡಿನಲ್ಲಿ ನೂತನವಾಗಿ ಆಯ್ಕೆಯಾದ ಯುವ ಕಾಂಗ್ರೆಸ್ ಸದಸ್ಯರ ಸಮಾವೇಶದಲ್ಲಿ ಮಾತನಾಡಿದ ರಾಹುಲ್, ನಿಧಾನವಾಗಿ ಮತ್ತು ವ್ಯವಸ್ಥಿತವಾಗಿ ಪಕ್ಷವನ್ನು ಬೆಳೆಸುವ ನಿಟ್ಟಿನಲ್ಲಿ ಗಮನಹರಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಕಳೆದ ಮೂರು ದಶಕಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಿಂದ ವಂಚಿತವಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಉತ್ತಮವಾಗಿ ಕಾರ್ಯನಿರ್ವಹಿಸಿ, ಜನಪರ ಸೇವೆ ಸಲ್ಲಿಸಿದಲ್ಲಿ ಖಂಡಿತವಾಗಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಲಿದೆ ಎಂದು ಸಂಸದ ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ