ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಪಾಕ್‌ನಿಂದ ಅಮದು ಮಾಡಿಕೊಂಡಿದ್ದು ಕೊಳೆತ ಈರುಳ್ಳಿ (India | Rotten onions | Pak suppliers | Markets)
Bookmark and Share Feedback Print
 
PTI
ಪಾಕಿಸ್ತಾನದಿಂದ ಈರುಳ್ಳಿಯನ್ನು ಅಮದು ಮಾಡಿಕೊಂಡಲ್ಲಿ ಈರುಳ್ಳಿ ದರಗಳಲ್ಲಿ ಇಳಿಕೆಯಾಗಲಿದೆ ಎಂದು ನಿರೀಕ್ಷಿಸಲಾಗಿತ್ತು.ಆದರೆ, ಉತ್ತರ ಭಾರತದ ಮಾರುಕಟ್ಟೆಗಳಿಗೆ ತಲುಪಿದ ಈರುಳ್ಳಿ, ಬಹುತೇಕ ಕೊಳೆತ ಸ್ಥಿತಿಯಲ್ಲಿರುವುದರಿಂದ ಗ್ರಾಹಕರು ಖರೀದಿಗೆ ಮುಂದೆಬರುತ್ತಿಲ್ಲ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ.

ದರ ಏರಿಕೆಗೆ ಕಾರಣವಾದ ಈರುಳ್ಳಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ವರ್ತಕರ ತಾಣಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೇಶದ ಕೆಲ ವರ್ತಕರು ಪಾಕಿಸ್ತಾನದ ಸಿಂಧ್ ಪ್ರಾಂತ್ಯದಿಂದ ಈರುಳ್ಳಿಯನ್ನು ಖರೀದಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಈರುಳ್ಳಿ ದರದಲ್ಲಿ ಇಳಿಕೆಯಾಗಲಿದೆ ಎಂದು ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನದಿಂದ ಮೊದಲ ಹಂತವಾಗಿ ಪ್ರತಿ ಕೆಜಿ ಈರುಳ್ಳಿಗೆ 19 ರೂಪಾಯಿಗಳಂತೆ 350 ಟನ್‌ ಈರುಳ್ಳಿಯನ್ನು ಅಮದು ಮಾಡಿಕೊಳ್ಳಲಾಗಿದೆ. ಆದರೆ, ಕೊಳೆತ ಈರುಳ್ಳಿ ಸರಬರಾಜಿನಿಂದಾಗಿ ದೇಶೀಯ ಮಾರುಕಟ್ಟೆಗಳ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ.

ದೆಹಲಿ ಮಾರುಕಟ್ಟೆಗಳಲ್ಲಿ, ಈರುಳ್ಳಿ ದರ ಪ್ರತಿ ಕೆಜಿಗೆ 60 ರೂಪಾಯಿಗಳಿಗೆ ತಲುಪಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ