ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್:ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ (Rupee | Forex | Dollar)
Bookmark and Share Feedback Print
 
ಏಷ್ಯಾ ಕರೆನ್ಸಿಗಳ ಮೌಲ್ಯ ಕುಸಿತದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 2 ಪೈಸೆ ಇಳಿಕೆಯಾಗಿ 45.18 ರೂಪಾಯಿಗಳಿಗೆ ತಲುಪಿದೆ.

ಮಾಸಾಂತ್ಯದ ಹಿನ್ನೆಲೆಯಲ್ಲಿ, ಅಮದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳ ಹಾಗೂ ಶೇರುಪೇಟೆಯ ದುರ್ಬಲ ವಹಿವಾಟಿನಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ, ಡಾಲರ್ಎದುರಿಗೆ ರೂಪಾಯಿ 7 ಪೈಸೆ ಕುಸಿತ ಕಂಡು 45.16/17 ರೂಪಾಯಿಗಳಿಗೆ ತಲುಪಿತ್ತು.ಇಂದಿನ ಆರಂಭಿಕ ವಹಿವಾಟಿನಲ್ಲಿ, ಮತ್ತೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 2 ಪೈಸೆ ಇಳಿಕೆಯಾಗಿ 45.18 ರೂಪಾಯಿಗಳಿಗೆ ತಲುಪಿದೆ.

ಮಾಸಾಂತ್ಯದಿಂದಾಗಿ ಅಮದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿಯಲು ಕಾರಣವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 102.52 ಪಾಯಿಂಟ್‌ಗಳ ಕುಸಿತ ಕಂಡು 19,880.36 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರೂಪಾಯಿ, ಫಾರೆಕ್ಸ್, ಡಾಲರ್