ದೇಶಿಯ ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾಗಿದ್ದರಿಂದ ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಕೇಂದ್ರದ ವಿತ್ತಖಾತೆ ಸಚಿವ ಪ್ರಣಬ್ ಮುಖರ್ಜಿ ಹೇಳಿದ್ದಾರೆ.
ವಿದೇಶಿ ಬಂಡವಾಳದ ಒಳಹರಿವನ್ನು ಅರಗಿಸಿಕೊಳ್ಳುವ ಶಕ್ತಿ ದೇಶದ ಆರ್ಥಿಕತೆಗಿದೆ.ಒಂದು ವೇಳೆ ಅದಕ್ಕಿಂತ ಹೆಚ್ಚಾದಲ್ಲಿ ಕಳವಳಕ್ಕೆ ಕಾರಣವಾಗುತ್ತದೆ. ಸದ್ಯಕ್ಕೆ ಅಂತಹ ಯಾವುದೇ ಸ್ಥಿತಿ ಎದುರಾಗಿಲ್ಲ ಎಂದು ಸಚಿವ ಮುಖರ್ಜಿ ತಿಳಿಸಿದ್ದಾರೆ.
ಬಂಡವಾಳ ಮಾರುಕಟ್ಟೆಗಳಲ್ಲಿ ಪ್ರಸಕ್ತ ವರ್ಷದ ನವೆಂಬರ್‌ವರೆಗೆ 38.5 ಬಿಲಿಯನ್ ಡಾಲರ್‌ಗಳ ವಿದೇಶಿ ಬಂಡವಾಳ ಹೂಡಿಕೆಯಾಗಿದೆ.
ಜನೆವರಿ-ಅಕ್ಟೋಬರ್ ತಿಂಗಳ ಅವಧಿಯಲ್ಲಿ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಶೇ.27ರಷ್ಟು ಹೆಚ್ಚಳವಾಗಿದ್ದು, 17.37 ಬಿಲಿಯನ್ ಡಾಲರ್‌ಗಳಿಗೆ ತಲುಪಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ವಿದೇಶಿ ಬಂಡವಾಳ ಹೂಡಿಕೆ 23.8 ಬಿಲಿಯನ್ ಡಾಲರ್‌ಗಳಿಗೆ ತಲುಪಿತ್ತು.