ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಬಲವರ್ಧನೆ (Rupee | US dollar | Forex | Sensex)
Bookmark and Share Feedback Print
 
ಡಾಲರ್ ಎದುರಿಗೆ ಏಷ್ಯಾ ಕರೆನ್ಸಿಗಳ ಚೇತರಿಕೆಯ ವಹಿವಾಟಿನಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 3 ಪೈಸೆ ಏರಿಕೆಯಾಗಿ 45.09 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 4 ಪೈಸೆ ಏರಿಕೆ ಕಂಡು 45.12/13 ರೂಪಾಯಿಗಳಿಗೆ ತಲುಪಿತ್ತು.

ಶೇರುಪೇಟೆಯ ಚೇತರಿಕೆಯ ಆರಂಭಿಕ ವಹಿವಾಟು ಹಾಗೂ ಏಷ್ಯಾ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ದುರ್ಬಲವಾದ ಹಿನ್ನೆಲೆಯಲ್ಲಿ ರೂಪಾಯಿ ಮೌಲ್ಯ ಚೇತರಿಕೆ ಕಂಡಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 86.34 ಪಾಯಿಂಟ್‌ಗಳ ಚೇತರಿಕೆ ಕಂಡು 20,158.00 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ