ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಲಕ್ನೋ: 25 ಮಳಿಗೆಗಳಲ್ಲಿ ಪ್ರತಿ ಕೆಜಿ ಈರುಳ್ಳಿಗೆ 22-24 ರೂಪಾಯಿ ದರ (Administration | Outlets | Sell onions | Onion prices)
Bookmark and Share Feedback Print
 
PTI
ಈರುಳ್ಳಿ ದರ ಏರಿಕೆಯಿಂದ ಕಂಗಾಲಾಗಿರುವ ಗ್ರಾಹಕರಿಗೆ ಕೆಲ ಮಟ್ಟಿನ ನಿರಾಳತೆಯನ್ನು ಒದಗಿಸಲು ಜಿಲ್ಲಾಡಳಿತ, ಜಿಲ್ಲೆಯ 25 ಮಳಿಗೆಗಳಲ್ಲಿ ಪ್ರತಿ ಕೆಜಿ ಈರುಳ್ಳಿಗೆ 22-24 ರೂಪಾಯಿಗಳಿಗೆ ಮಾರಾಟ ಮಾಡುವುದಾಗಿ ಘೋಷಿಸಿದೆ.

ಜಿಲ್ಲಾಡಳಿತ ನಿನ್ನೆ ನಡೆಸಿದ ಸಭೆಯಲ್ಲಿ, ಸೂಕ್ತ ದರದಲ್ಲಿ 25 ರಿಟೇಲ್ ಮಳಿಗೆಗಳಲ್ಲಿ ಈರುಳ್ಳಿ ಮಾರಾಟ ಮಾಡುವ ನಿರ್ಧಾರ ತೆಗೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗ್ರಾಹಕರು ಕಡಿಮೆ ದರದ ಈರುಳ್ಳಿ ಖರೀದಿಗಾಗಿ ದೂರದ ಬಡಾವಣೆಗಳಿಗೆ ಪ್ರಯಾಣ ಮಾಡದಿರಲು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳಿಗೆಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

ಈರುಳ್ಳಿ ದರ ಏರಿಕೆಯ ಲಾಭವನ್ನು ಕಾಳಸಂತೆಕೋರರು ಪಡೆಯದಂತೆ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಡಳಿತ ಕೋರಿದೆ ಎಂದು ಮೂಲಗಳು ತಿಳಿಸಿವೆ.

ರಿಟೇಲ್ ಮಾರುಕಟ್ಟೆಗಳಲ್ಲಿ ಈರುಳ್ಳಿ ದರ ಏರಿಕೆಯಾಗುತ್ತಿರುವುದರಿಂದ, ಸಗಟು ವ್ಯಾಪಾರಿಗಳು ಹೆಚ್ಚಿನ ದರದಲ್ಲಿ ಈರುಳ್ಳಿ ಮಾರಾಟ ಮಾಡಲು ಅನುಮತಿ ನೀಡುವುದಿಲ್ಲ ಎಂದು ಆಹಾರ ಸರಬರಾಜು ಇಲಾಖೆಯ ವ್ಯವಸ್ಥಾಪಕ ಎಸ್.ಕೆ.ಸಿಂಗ್ ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ