ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಡೀಸೆಲ್ ದರ ಏರಿಕೆ: ಅಧಿಕಾರಯುತ ಸಚಿವರ ಸಮಿತಿ ಸಭೆ (Government | Diesel price | Inflation | Political)
Bookmark and Share Feedback Print
 
ಹಣದುಬ್ಬರವನ್ನು ನಿಯಂತ್ರಿಸಲು ಡೀಸೆಲ್ ದರಗಳನ್ನು ಸ್ಥಿರವಾಗಿಸಬೇಕೋ ಅಥವಾ ದರಗಳನ್ನು ಹೆಚ್ಚಿಸಿ, ತೈಲ ಕಂಪೆನಿಗಳ ನಷ್ಟವನ್ನು ಕಡಿಮೆ ಮಾಡಬೇಕೋ ಎನ್ನುವ ಕುರಿತಂತೆ ಕೇಂದ್ರ ಸರಕಾರ ಚಿಂತನೆ ನಡೆಸಿದೆ.

ಕೇಂದ್ರದ ಅಧಿಕಾರಯುತ ಸಚಿವರ ಸಮಿತಿ, ಇಂದು ಸಂಜೆ ಸಭೆ ಸೇರಲಿದ್ದು, ಡೀಸೆಲ್ ದರ ಏರಿಕೆ ಕುರಿತಂತೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.

ಏಷ್ಯಾದ ಮೂರನೇ ಬೃಹತ್ ಆರ್ಥಿಕ ರಾಷ್ಟ್ರವಾದ ಭಾರತ,ಸರಕಾರಿ ಸ್ವಾಮ್ಯದ ತೈಲ ಕಂಪೆನಿಗಳಿಗೆ ನೀಡಲಾಗುವ ಅನುದಾನದಲ್ಲಿ ಕಡಿತಗೊಳಿಸಿ, ಅಂತಾರಾಷ್ಟ್ರೀಯ ಕಚ್ಚಾ ತೈಲ ಮಾರುಕಟ್ಟೆಯ ವಾಸ್ತವತೆಗಳನ್ನು ಜನಸಾಮಾನ್ಯರಿಗೆ ತಿಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕು ಎನ್ನುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸುತ್ತಿದೆ.

ಡೀಸೆಲ್ ಮತ್ತು ಅಡುಗೆ ಅನಿಲ ದರ ಏರಿಕೆಗಳು ಸಂಪೂರ್ಣವಾಗಿ ರಾಜಕೀಯಗೊಂಡಿದ್ದು, ಒಂದು ವೇಳೆ ದರ ಏರಿಕೆ ಮಾಡಿದಲ್ಲಿ ಕೇಂದ್ರ ಸರಕಾರ ವಿರೋಧ ಪಕ್ಷಗಳ ಭಾರಿ ಪ್ರತಿಭಟನೆಯನ್ನು ಎದುರಿಸಬೇಕಾಗುತ್ತದೆ ಎನ್ನುವ ಭೀತಿ ಕಾಡುತ್ತಿದೆ.
ಸಂಬಂಧಿತ ಮಾಹಿತಿ ಹುಡುಕಿ