ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಆಹಾರ ಹಣದುಬ್ಬರ ನಿಯಂತ್ರಣಕ್ಕೆ ಸರಕಾರ ಕಠಿಣ ಕ್ರಮ:ಪ್ರಣಬ್ (Pranab Mukherjee | Rising prices | Inflation | Food inflation)
Bookmark and Share Feedback Print
 
ಆಹಾರ ಹಣದುಬ್ಬರ ದರ ಪ್ರಸಕ್ತ ವಾರಂತ್ಯಕ್ಕೆ ಶೇ.14.44ಕ್ಕೆ ಏರಿಕೆಯಾಗಿರುವುದು ಕಳವಳಕಾರಿಯಾಗಿದ್ದು, ದರ ಏರಿಕೆ ನಿಯಂತ್ರಣಕ್ಕೆ ಸರಕಾರ ಮತ್ತಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿದೆ ಎಂದು ಕೇಂದ್ರ ವಿತ್ತಖಾತೆ ಸಚಿವ ಪ್ರಣಬ್ ಮುಖರ್ಜಿ ಹೇಳಿದ್ದಾರೆ.

ಅಗತ್ಯ ವಸ್ತುಗಳ ದರ ನಿಯಂತ್ರಣ ಕುರಿತಂತೆ ಸರಕಾರ ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ಈರುಳ್ಳಿ ದರ ನಿಯಂತ್ರಣಕ್ಕೆ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಹಾಲು, ಹಣ್ಣು, ತರಕಾರಿ ದರಗಳ ಏರಿಕೆಯಿಂದಾಗಿ ಆಹಾರ ಹಣದುಬ್ಬರ ಹೆಚ್ಚಳವಾಗಿದೆ ಎಂದು ತಿಳಿಸಿದ್ದಾರೆ.

ಆಹಾರ ಹಣದುಬ್ಬರ ದರ ಏರಿಕೆ ಕಳವಳ ಮೂಡಿಸುವಂತೆಹದಾಗಿದೆ.ಮೂಲ ಪ್ರಭಾವದಿಂದ ಆಹಾರ ಹಣದುಬ್ಬರ ಏರಿಕೆಯಾಗಿದೆ ಎಂದು ಈ ಮೊದಲು ಭಾವಿಸಲಾಗಿತ್ತು. ಆದರೆ, ಅಗತ್ಯ ವಸ್ತುಗಳ ದರ ಏರಿಕೆಯಿಂದ ಆಹಾರ ಹಣದುಬ್ಬರ ದರದಲ್ಲಿ ಏರಿಕೆಯಾಗಿದೆ.

ಆಹಾರ ಹಣದುಬ್ಬರ ದರ ಸತತ ಐದನೇ ವಾರಗಳ ಅವಧಿಗೆ ಏರಿಕೆ ಕಂಡಿದ್ದು, ಶೇ.14.44ಕ್ಕೆ ಏರಿಕೆ ಕಂಡಿದೆ.
ಸಂಬಂಧಿತ ಮಾಹಿತಿ ಹುಡುಕಿ