ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಪ್ರೀತಿ ಸಂಸ್ಥೆಯಿಂದ ಚೆನ್ನೈಯಲ್ಲಿ ರಸ್ತೆ ಸುರಕ್ಷತಾ ಜಾಗೃತಿ (Road safety | Preethi | Awareness | Road accident)
Bookmark and Share Feedback Print
 
PTI
ವಿಶ್ವದಾದ್ಯಂತ ರಸ್ತೆ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ, ರಸ್ತೆ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವುದು ಇಂದಿನ ಅಗತ್ಯತೆಯಾಗಿದೆ. ವಿಶ್ವದಲ್ಲಿ ಪ್ರತಿ ವರ್ಷ 1.2 ಮಿಲಿಯನ್ ಜನರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ವಿಶ್ವದಲ್ಲಿ ವಿಶೇಷವಾಗಿ ಭಾರತದಲ್ಲಿ ರಸ್ತೆ ಅಪಘಾತಗಳ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ. ಪ್ರತಿ ಗಂಟೆಗೆ 14 ಮಂದಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿದ್ದಾರೆ. ಪ್ರತಿ ವರ್ಷ 135,000 ರಸ್ತೆ ಅಪಘಾತಗಳು ಸಂಭವಿಸುತ್ತಿವೆ. ವಿಶ್ವದ ರಸ್ತೆ ಸಂಪರ್ಕ‌ಗಳಿಗೆ ಹೋಲಿಸಿದಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತಕ್ಕೆ ರಸ್ತೆ ಸುರಕ್ಷತೆ ಇಂದಿನ ಅಗತ್ಯತೆಯಾಗಿದೆ.

ದೇಶದಲ್ಲಿ ಅತಿ ಹೆಚ್ಚು ಅಪಘಾತಗಳು ಸಂಭವಿಸುವ ಅಭಿವೃದ್ಧಿ ಹೊಂದಿದ ರಾಜ್ಯವಾದ ತಮಿಳುನಾಡಿನಲ್ಲಿ, ಸುರಕ್ಷಿತ ವಾಹನ ಚಾಲನೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ಸರಕಾರ ವಿಫಲವಾಗಿದೆ.ಮಿಕ್ಸರ್ ಗ್ರೈಂಡರ್ ತಯಾರಿಕೆ ಸಂಸ್ಥೆಯಾದ ಪ್ರೀತಿ, ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿಯನ್ನು ಮೂಡಿಸಲು ಹಲವಾರು ಕಾರ್ಯಕ್ರಮಗಳನ್ನುಹಮ್ಮಿಕೊಂಡಿದೆ,

ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕರರಾದ ಟಿ.ಟಿ. ವರದರಾಜನ್ ಮತ್ತು ನ್ಯೂಜಿಲೆಂಡ್‌ನಿಂದ ಆಗಮಿಸಿದ ಮೋಟಾರ್‌ಸೈಕಲ್ ಸವಾರರ ತಂಡ ಚೆನ್ನೈನಿಂದ ಪ್ರಯಾಣವನ್ನು ಬೆಳಸಲಿದ್ದು, ತಮಿಳುನಾಡು, ಕೇರಳ ಮತ್ತು ಕರ್ನಾಟಕ ರಾಜ್ಯಗಳಲ್ಲಿ ಜನೆವರಿ 21ರ ವರೆಗೆ ಸಂಚರಿಸಲಿದೆ.
ಸಂಬಂಧಿತ ಮಾಹಿತಿ ಹುಡುಕಿ