ಡಾಲರ್ ಎದುರಿಗೆ ಏಷ್ಯಾ ಕರೆನ್ಸಿಗಳ ಚೇತರಿಕೆಯಿಂದಾಗಿ, ರೂಪಾಯಿ ಮೌಲ್ಯದಲ್ಲಿ 11 ಪೈಸೆ ಏರಿಕೆಯಾಗಿ 44.84 ರೂಪಾಯಿಗಳಿಗೆ ತಲುಪಿದೆ.
ಡಾಲರ್ ಎದುರಿಗೆ ಏಷ್ಯಾ ಕರೆನ್ಸಿಗಳ ಚೇತರಿಕೆ ಹಾಗೂ ಶೇರುಪೇಟೆಗಳ ಉತ್ತಮ ವಹಿವಾಟಿನಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಏರಿಕೆಯಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 8 ಪೈಸೆ ಏರಿಕೆಯಾಗಿ 44.95/96 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 11 ಪೈಸೆ ಏರಿಕೆಯಾಗಿ 44.84 ರೂಪಾಯಿಗಳಿಗೆ ತಲುಪಿದೆ.
ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 93.19 ಪಾಯಿಂಟ್‌ಗಳ ಚೇತರಿಕೆ ಕಂಡು 20,482.26 ಅಂಕಗಳಿಗೆ ತಲುಪಿದೆ.