ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್:ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ (Rupee | Forex | Dollar)
Bookmark and Share Feedback Print
 
ಸತತ ನಾಲ್ಕು ದಿನಗಳ ಏರಿಕೆ ಕಂಡಿದ್ದ ರೂಪಾಯಿ ಮೌಲ್ಯ, ಏಷ್ಯಾ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಚೇತರಿಕೆಯಿಂದಾಗಿ ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ 4 ಪೈಸೆ ಏರಿಕೆ ಕಂಡು 44.74 ರೂಪಾಯಿಗಳಿಗೆ ತಲುಪಿದೆ.

ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಚೇತರಿಕೆಯಿಂದ ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿದ್ದು,ಶೇರುಪೇಟೆಯ ಚೇತರಿಕೆಯ ವಹಿವಾಟಿನಿಂದಾಗಿ ರೂಪಾಯಿ ಮೌಲ್ಯದಲ್ಲಿ ಮತ್ತಷ್ಟು ಕುಸಿತವಾಗುವುದನ್ನು ತಡೆದಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಬ್ಯಾಂಕ್‌ಗಳು ಮತ್ತು ಅಮದು ವಹಿವಾಟುದಾರರಿಂದ ಡಾಲರ್ ಮಾರಾಟದಲ್ಲಿ ಹೆಚ್ಚಳವಾಗಿದ್ದರಿಂದ, ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 26 ಪೈಸೆ ಏರಿಕೆ ಕಂಡು 44.70/71 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ 4 ಪೈಸೆ ಏರಿಕೆ ಕಂಡು 44.74 ರೂಪಾಯಿಗಳಿಗೆ ತಲುಪಿದೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 153.77 ಪಾಯಿಂಟ್‌ಗಳ ಚೇತರಿಕೆ ಕಂಡು 20,662.86 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರೂಪಾಯಿ, ಫಾರೆಕ್ಸ್, ಡಾಲರ್