ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಬ್ಯಾಂಕ್‌ಗಳಿಗೆ ಚಿನ್ನ, ಬೆಳ್ಳಿ ಅಮದಿಗಾಗಿ ಅನುಮತಿ:ಆರ್‌ಬಿಐ (RBI | Gold | Silver | Import | Banks)
Bookmark and Share Feedback Print
 
ಭಾರತೀಯ ರಿಸರ್ವ್ ಬ್ಯಾಂಕ್ ಚಿನ್ನ ಮತ್ತು ಬೆಳ್ಳಿಯನ್ನು ಅಮದು ಮಾಡಿಕೊಳ್ಳಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನಾಲ್ಕು ಸಹೋದರ ಬ್ಯಾಂಕ್‌ಗಳು ಸೇರಿದಂತೆ ಒಟ್ಟು ಏಳು ಬ್ಯಾಂಕ್‌ಗಳಿಗೆ ಪರವಾನಿಗಿ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಸೌಥ್ ಇಂಡಿಯನ್ ಬ್ಯಾಂಕ್, ಕರುರ್ ವೈಶ್ಯ ಬ್ಯಾಂಕ್, ಸ್ಟೇಟ್‌ ಬ್ಯಾಂಕ್ ಆಫ್ ಹೈದ್ರಾಬಾದ್, ಸ್ಟೇಟ್‌ ಬ್ಯಾಂಕ್ ಆಫ್ ಬಿಕನೇರ್, ಸ್ಟೇಟ್‌ ಬ್ಯಾಂಕ್ ಆಫ್ ಟ್ರಾವನ್‌ಕೊರ್, ಸ್ಟೇಟ್‌ ಬ್ಯಾಂಕ್ ಆಫ್ ಮೈಸೂರು ಮತ್ತಿ ಪಂಜಾಬ್ ಆಂಡ್ ಸಿಂಧ್ ಬ್ಯಾಂಕ್‌ಗಳಿಗೆ ಚಿನ್ನ ಮತ್ತು ಬೆಳ್ಳಿಯನ್ನು ಅಮದು ಮಾಡಿಕೊಳ್ಳಬಹುದಾಗಿದೆ ಎಂದು ಆರ್‌ಬಿಐ ಅಧಿಕಾರಿಗಳು ತಿಳಿಸಿದ್ದಾರೆ.

ಅಲಹಾಬಾದ್ ಬ್ಯಾಂಕ್, ಎಕ್ಸಿಸ್ ಬ್ಯಾಂಕ್ ಲಿಮಿಟೆಡ್, ಬ್ಯಾಂಕ್ ಆಫ್ ನೊವಾ ಸ್ಕೊಟಿಯಾ, ಕೆನರಾ ಬ್ಯಾಂಕ್, ಫೆಡರಲ್ ಬ್ಯಾಂಕ್ ಲಿಮಿಟೆಡ್,ಎಚ್‌ಡಿಎಫ್‌ಸಿ ಬ್ಯಾಂಕ್ ಲಿಮಿಟೆಡ್, ಐಸಿಐಸಿಐ ಬ್ಯಾಂಕ್ ಲಿಮಿಟೆಡ್, ಕೊಟಾಕ್ ಮಹೀಂದ್ರಾ ಬ್ಯಾಂಕ್ ಲಿಮಿಟೆಡ್, ಸ್ಟ್ಯಾಂಡರ್ಡ್ ಚಾರ್ಟರ್ಡ್ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್ ಮತ್ತು ಯುನಿಯನ್ ಬ್ಯಾಂಕ್‌ಗಳು ಚಿನ್ನ ಮತ್ತು ಬೆಳ್ಳಿ ಅಮದಿಗಾಗಿ ಈಗಾಗಲೇ ಆರ್‌ಬಿಐನಿಂದ ಅನುಮತಿ ಪಡೆದಿವೆ.

ಚಿನ್ನ ಮತ್ತು ಬೆಳ್ಳಿಯನ್ನು ಅಮದು ಮಾಡಿಕೊಳ್ಳಲು ಹೆಚ್ಚಿನ ಬ್ಯಾಂಕ್‌ಗಳಿಗೆ ಅನುಮತಿ ನೀಡುವುದರಿಂದ, ಹೆಚ್ಚಿನ ಸ್ಪರ್ಧೆ ಉಂಟಾಗಿ ಗ್ರಾಹಕರಿಗೆ ಲಾಭವಾಗುತ್ತದೆ ಎಂದು ಬ್ಯಾಂಕ್ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ