ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ (Rupee | Forex | Dollar)
Bookmark and Share Feedback Print
 
ಸಾಗರೋತ್ತರ ಮಾರುಕಟ್ಟೆಗಳಲ್ಲಿ ಬ್ಯಾಂಕ್‌ಗಳು ಮತ್ತು ಕಾರ್ಪೋರೇಟ್ ಕಂಪೆನಿಗಳಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 28 ಪೈಸೆ ಇಳಿಕೆಯಾಗಿ 45.26 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 45.22/24 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 28 ಪೈಸೆ ಇಳಿಕೆಯಾಗಿ 45.26 ರೂಪಾಯಿಗಳಿಗೆ ತಲುಪಿದೆ.

ಸಾಗರೋತ್ತರ ಮಾರುಕಟ್ಟೆಗಳಲ್ಲಿ ಬ್ಯಾಂಕ್‌ಗಳು ಮತ್ತು ಕಾರ್ಪೋರೇಟ್ ಕಂಪೆನಿಗಳಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದ ಕುಸಿತಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಹೂಡಿಕೆದಾರರು ಇತರ ಕ್ಷೇತ್ರಗಳತ್ತ ಹೆಚ್ಚಿನ ಆಸಕ್ತಿಯನ್ನು ತೋರಿದ್ದರಿಂದ, ಏಷ್ಯಾ ಮಾರುಕಟ್ಟೆಗಳ ತೈಲ ವಹಿವಾಟಿನಲ್ಲಿ ಕುಸಿತ ಕಂಡಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರೂಪಾಯಿ, ಫಾರೆಕ್ಸ್, ಡಾಲರ್