ವಿದೇಶಿ ವಿನಿಮಯ ಮಾರುಕಟ್ಟೆಯ ಇಂದಿನ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 4 ಪೈಸೆ ಇಳಿಕೆ ಕಂಡು 45.36 ರೂಪಾಯಿಗಳಿಗೆ ತಲುಪಿದೆ.
ಏಷ್ಯಾ ಕರೆನ್ಸಿಗಳ ದುರ್ಬಲ ವಹಿವಾಟು ಹಾಗೂ ಅಮದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಏರಿಕೆಯಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಫಾರೆಕ್ಸ್ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 34 ಪೈಸೆ ಕುಸಿತ ಕಂಡು 45.32/33 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 4 ಪೈಸೆ ಇಳಿಕೆ ಕಂಡು 45.36 ರೂಪಾಯಿಗಳಿಗೆ ತಲುಪಿದೆ.