ಇತರ ರಾಜ್ಯಗಳಿಂದ ನಗರದ ಮಾರುಕಟ್ಟೆಗೆ ಈರುಳ್ಳಿ ಆಗಮನದಲ್ಲಿ ಹೆಚ್ಚಳವಾದ ಹಿನ್ನೆಲೆಯಲ್ಲಿ, ಸಗಟು ಮಾರುಕಟ್ಟೆಗಳಲ್ಲಿ ಈರುಳ್ಳಿ ದರ, ಪ್ರತಿ ಕೆಜಿಗೆ 3 ರೂಪಾಯಿಗಳ ಕುಸಿತ ಕಂಡು 40 ರೂಪಾಯಿಗಳಿಗೆ ತಲುಪಿದೆ.
ಮಹಾರಾಷ್ಟ್ರ, ಗುಜರಾತ್ ,ಮಧ್ಯಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳಿಂದ ಮಾರುಕಟ್ಟೆಗಳಿಗೆ ಈರುಳ್ಳಿ ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುತ್ತಿರುವುದರಿಂದ, ಈರುಳ್ಳಿ ದರ ಪ್ರತಿ ಕೆಜಿಗೆ 3 ರೂಪಾಯಿಗಳಷ್ಟು ಇಳಿಕೆ ಕಂಡಿದೆ ಎಂದು ಟೋಮ್ಯಾಟೋ ಮತ್ತು ಈರುಳ್ಳಿ ವರ್ತಕರ ಸಂಘದ ಮುಖ್ಯಸ್ಥ ರಾಜೇಂದ್ರ ಶರ್ಮಾ ಹೇಳಿದ್ದಾರೆ.
ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳಿಂದ ಇಂದು, 1,100 ಟನ್ ಈರುಳ್ಳಿ ನವದೆಹಲಿಯ ಮಾರುಕಟ್ಟೆಯನ್ನು ಪ್ರವೇಶಿಸಿದೆ ಎಂದು ತಿಳಿಸಿದ್ದಾರೆ.
ಮುಂಬರುವ ಎರಡು ಅಥವಾ ಮೂರು ದಿನಗಳಲ್ಲಿ ಈರುಳ್ಳಿ ರಿಟೇಲ್ ದರಗಳಲ್ಲಿ ಕೂಡಾ ಇಳಿಕೆಯಾಗುವ ಸಾಧ್ಯತೆಗಳಿವೆ ಎಂದು ಶರ್ಮಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಕಾಲಿಕ ಮಳೆಯಿಂದಾಗಿ ಈರುಳ್ಳಿ ಉತ್ಪನ್ನ ನಾಶವಾಗಿದ್ದರಿಂದ, ಕಳೆದ ಡಿಸೆಂಬರ್ ಅವಧಿಯಲ್ಲಿ ಈರುಳ್ಳಿ ದರ ಪ್ರತಿ ಕೆಜಿಗೆ 70-85 ರೂಪಾಯಿಗಳಿಗೆ ಏರಿಕೆಯಾಗಿತ್ತು.