ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಆರ್ಥಿಕ ವರ್ಷಾಂತ್ಯಕ್ಕೆ ಜಿಡಿಪಿ ದರ ಶೇ.8.5ಕ್ಕೆ ಏರಿಕೆ :ಪ್ರಧಾನಿ (Manmohan Singh | Indian economy | Next fiscal)
Bookmark and Share Feedback Print
 
ಜಾಗತಿಕ ಅಸ್ಥಿರತೆಗಳ ಮಧ್ಯೆಯು ದೇಶದ ಆರ್ಥಿಕ ವೃದ್ಧಿ ದರ ಪ್ರಸಕ್ತ ಆರ್ಥಿಕ ವರ್ಷಾಂತ್ಯಕ್ಕೆ ಶೇ.8.5ಕ್ಕೆ ತಲಪುವ ನಿರೀಕ್ಷೆಗಳಿದ್ದು, ಮುಂದಿನ ಆರ್ಥಿಕ ವರ್ಷದಲ್ಲಿ ಜಿಡಿಪಿ ದರ ಶೇ.9ರಿಂದ ಶೇ.10ಕ್ಕೆ ಏರಿಕೆಯಾಗುವ ವಿಶ್ವಾಸವಿದೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.

9ನೇ ಪ್ರವಾಸಿ ಭಾರತೀಯ ದಿನ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ, ಸಾಮಾಜಿಕ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ಹಣಕಾಸಿನ ನೆರವು ನೀಡಲಾಗುತ್ತಿದೆ ಎಂದರು.

ಜಾಗತಿಕ ಆರ್ಥಿಕ ಅಸ್ಥಿರತೆ ಮಧ್ಯೆಯೂ ದೇಶದ ಆರ್ಥಿಕತೆ ವೇಗವಾಗಿ ಚೇತರಿಕೆ ಕಾಣುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ಎರಡು ತ್ರೈಮಾಸಿಕ ಅವಧಿಯಲ್ಲಿ ಆರ್ಥಿಕ ವೃದ್ಧಿ ದರ ಶೇ.8.9ಕ್ಕೆ ತಲುಪಿದೆ.ಆರ್ಥಿಕ ವರ್ಷಾಂತ್ಯದವರೆಗೆ ಜಿಡಿಪಿ ದರ ಶೇ.8ರ ಆಸುಪಾಸಿನಲ್ಲಿರಲಿದೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ