ಐಟಿ ದಿಗ್ಗಜ ಸಂಸ್ಥೆ ಇನ್ಫೋಸಿಸ್‌ನ ಹೆಚ್ಚುವರಿ ನಿರ್ದೇಶಕರಾಗಿ ಆರ್.ಶೇಷಶಾಯಿ ನೇಮಕಗೊಂಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಇನ್ಫೋಸಿಸ್ ಮುಖ್ಯಾಲಯದಲ್ಲಿ ನಡೆದ ಮಂಡಳಿ ನಿರ್ದೇಶಕರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಶೇಷಶಾಯಿ ಅವರು ಭಾರತೀಯ ಕೈಗಾರಿಕಾ ಒಕ್ಕೂಟದ ಉಪಾಧ್ಯಕ್ಷರು ಹಾಗೂ ಟ್ರಕ್, ಬಸ್ ತಯಾರಿಕಾ ಸಂಸ್ಥೆ ಅಶೋಕ್ ಲೇಲ್ಯಾಂಡ್‌ನ ಆಡಳಿತ ನಿರ್ದೇಶಕರು.