ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಕಚ್ಚಾ ತೈಲ ದರ ಏರಿಕೆಯನ್ನು ಸರಕಾರ ಗಮನಿಸುತ್ತಿದೆ:ಪ್ರಣಬ್ (Government | Pranab Mukherjee | Crude oil prices)
PTI
ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ಎದುರಾದ ರಾಜಕೀಯ ಬಿಕ್ಕಟ್ಟಿನಿಂದಾಗಿ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರಗಳಲ್ಲಿ ಏರಿಕೆಯಾಗುತ್ತಿರುವುದನ್ನು ಸರಕಾರ ಗಮನಿಸುತ್ತಿದೆ. ದರ ಏರಿಕೆ ಸ್ಥಿತಿಯನ್ನು ನಿಭಾಯಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಕೇಂದ್ರ ವಿತ್ತಖಾತೆ ಸಚಿವ ಪ್ರಣಬ್ ಮುಖರ್ಜಿ ಹೇಳಿದ್ದಾರೆ.

ತೈಲ ಉತ್ಪಾದಕ ರಾಷ್ಟ್ರಗಳಲ್ಲಿ ರಾಜಕೀಯ ಅನಿಶ್ಚಿತತೆ ಎದುರಾಗಿರುವುದರಿಂದ, ತೈಲ ಉತ್ಪಾದನೆಯಲ್ಲಿ ಕುಂಠಿತವಾಗಿದೆ. ತೈಲ ಸರಬರಾಜಿನಲ್ಲಿ ಕೂಡಾ ತೊಂದರೆಯಾಗುತ್ತಿದೆ ಎಂದು ಸಚಿವ ಮುಖರ್ಜಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪೆಟ್ರೋಲಿಯಂ ಸಚಿವಾಲಯದೊಂದಿಗೆ ಕೇಂದ್ರದ ವಿತ್ತಸಚಿವಾಲಯ ನಿರಂತರ ಸಂಪರ್ಕದಲ್ಲಿದ್ದು, ಪರಿಸ್ಥಿತಿಯನ್ನು ನಿಭಾಯಿಸಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಕಳೆದ ಜುಲೈ 2008ರ ಅವಧಿಯಲ್ಲಿ ಕಚ್ಚಾ ತೈಲ ದರ ಪ್ರತಿ ಬ್ಯಾರೆಲ್‌ಗೆ 147 ಡಾಲರ್‌ಗಳಿಗೆ ತಲುಪಿದ ಸಂದರ್ಭದಲ್ಲಿ ಕೂಡಾ ಕೇಂದ್ರ ಸರಕಾರ ಉತ್ತಮವಾಗಿ ಕಾರ್ಯನಿರ್ವಹಿಸಿದೆ.ಕೇಂದ್ರ ಸರಕಾರ ತೈಲ ಉತ್ಪಾದಕ ರಾಷ್ಟ್ರಗಳ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಸಚಿವ ಪ್ರಣಬ್ ಮುಖರ್ಜಿ ತಿಳಿಸಿದ್ದಾರೆ.
ಸಂಬಂಧಿತ ಲೇಖನಗಳು