ಬಹುಕೋಟಿ ಧಾನ್ಯ ಹಗರಣಕ್ಕೆ ಸಂಬಂಧಿಸಿದಂತೆ. ಅಡಳಿತರೂಢ ಬಿಎಸ್‌ಪಿ ಪಕ್ಷದ ನಾಯಕನ ನಿವಾಸ ಮತ್ತು ಕಚೇರಿಗಳ ಮೇಲೆ ಸಿಬಿಐ ದಾಳಿ ನಡೆಸಿ ಕೆಲ ದಾಖಲೆಗಳನ್ನು ವಶಪಡಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.
ಬಡವರಿಗೆ ಹಂಚಲು ಮೀಸಲಾಗಿರಿಸಿದ್ದ ಆಹಾರ ಧಾನ್ಯಗಳನ್ನು, ಇತರ ರಾಜ್ಯಗಳ ಮಾರುಕಟ್ಟೆಗಳಿಗೆ ಮಾರಾಟ ಮಾಡಿರುವ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ವಕ್ತಾರರು ಬಹಿರಂಗಪಡಿಸಿದ್ದಾರೆ.
ಬಡವರಿಗೆ ಮೀಸಲಾಗಿರಿಸಿದ್ದ ಆಹಾರ ಧಾನ್ಯಗಳನ್ನು ವಿತರಿಸಲಾಗಿದೆ ಎಂದು ಸರಕಾರಿ ದಾಖಲೆಗಳಲ್ಲಿ ನಮೂದಿಸಿರುವ ದಾಖಲೆಗಳು ಕೂಡಾ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಜಿಲ್ಲೆಯ ಆರು ವಿವಿಧ ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವರ್ಷ, ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಬೆಂಚ್,ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಪ್ರಕರಣ ವಿಚಾರಣೆ ನಡೆಸಿ ಕೇಂದ್ರದ ತನಿಖಾ ದಳದಿಂದ ಬಹುಕೋಟಿ ಹಗರಣದ ತನಿಖೆ ನಡೆಸುವಂತೆ ಆದೇಶಿಸಿತ್ತು.