ತೆರಿಗೆ ವಿನಾಯಿತಿ ನಿರೀಕ್ಷೆ ಬೇಡ:ರಫ್ತುದಾರರಿಗೆ ಪ್ರಣಬ್ ಸಲಹೆ
ನವದೆಹಲಿ, ಮಂಗಳವಾರ, 8 ಫೆಬ್ರವರಿ 2011( 16:09 IST )
PTI
ಬಜೆಟ್ ಮಂಡನೆ ಮುಂದಿನ ತಿಂಗಳಿರುವಂತೆ ರಫ್ತು ವಹಿವಾಟುದಾರರು ತೆರಿಗೆ ವಿನಾಯಿತಿಗಳನ್ನು ನಿರೀಕ್ಷಿಸುವುದನ್ನು ಬಿಟ್ಟು ಎದುರಾಗಿರುವ ಸಮಸ್ಯೆಗಳನ್ನು ಪರಿಹರಿಸಲು ಶ್ರಮಿಸುವಂತೆ ಕೇಂದ್ರ ವಿತ್ತಖಾತೆ ಸಚಿವ ಪ್ರಣಬ್ ಮುಖರ್ಜಿ ಹೇಳಿದ್ದಾರೆ.
ಕೇಂದ್ರ ಸರಕಾರ ತನ್ನ ಪಾನಿಲ ಕರ್ತವ್ಯವನ್ನು ನಿರ್ವಹಿಸುತ್ತಿದೆ. ರಫ್ತು ವಹಿವಾಟುದಾರರು ಕೂಡಾ ಸಾಗರೋತ್ತರ ಮಾರುಕಟ್ಟೆಗಳಲ್ಲಿ ಎದುರಾಗುವ ಬಿಕ್ಕಟ್ಟುಗಳ ನಿವಾರಣೆಗೆ ತಮ್ಮನ್ನು ತಾವು ಸಜ್ಜುಗೊಳಿಸುವುದು ಅಗತ್ಯವಾಗಿದೆ. ಸರಕಾರ ವಿನಾಯಿತಿಗಳನ್ನು ಘೋಷಿಸುತ್ತದೆ ಎಂದು ನಿರೀಕ್ಷಿಸುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
ಕೇಂದ್ರ ಸರಕಾರ, ಫೆಬ್ರವರಿ 28 ರಂದು ಬಜೆಟ್ ಮಂಡಿಸಲಿದೆ ಎಂದು ವಿತ್ತಖಾತೆ ಸಚಿವ ಪ್ರಣಬ್ ಮುಖರ್ಜ ಹೇಳಿದ್ದಾರೆ.
ಏತನ್ಮಧ್ಯೆ, ಪ್ರಸಕ್ತ ಆರ್ಥಿಕ ವರ್ಷಾಂತ್ಯಕ್ಕೆ 200 ಬಿಲಿಯನ್ ಡಾಲರ್ ರಫ್ತು ವಹಿವಾಟು ಗುರಿಯನ್ನು ತಲುಪುವ ಸಾಧ್ಯತೆಗಳಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
2010-11ರ ಅವಧಿಯ ಏಪ್ರಿಲ್-ಡಿಸೆಂಬರ್ ತಿಂಗಳ ಅವಧಿಯಲ್ಲಿ ಈಗಾಗಲೇ ರಫ್ತು ವಹಿವಾಟು 164.7 ಬಿಲಿಯನ್ ಡಾಲರ್‌ಗಳಿಗೆ ತಲುಪಲಿದೆ ಎಂದು ಪ್ರಣಬ್ ಮುಖರ್ಜಿ ಸಂತಸ ವ್ಯಕ್ತಪಡಿಸಿದ್ದಾರೆ.