ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಕೇಂದ್ರ ಸರಕಾರದಿಂದ ಈರುಳ್ಳಿ ರಫ್ತು ನಿಷೇಧ ಹಿಂದಕ್ಕೆ (Onions exports | Government | Lifts ban | EGoM | Pranab Mukherjee)
PTI
ದೇಶಿಯ ಮಾರುಕಟ್ಟೆಯಲ್ಲಿ ಈರುಳ್ಳಿ ದರ ಗಗನಕ್ಕೇರಿದ ಸಂದರ್ಭದಲ್ಲಿ ರಫ್ತು ವಹಿವಾಟಿಗೆ ನಿಷೇಧ ಹೇರಲಾಗಿತ್ತು. ಇದೀಗ ಈರುಳ್ಳಿ ದರ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಫ್ತು ವಹಿವಾಟು ನಿಷೇಧವನ್ನು ಸರಕಾರ ಹಿಂದಕ್ಕೆ ಪಡೆಯಲು ನಿರ್ಧರಿಸಿದೆ.

ಕೇಂದ್ರದ ವಿತ್ತಖಾತೆ ಸಚಿವ ಪ್ರಣಬ್ ಮುಖರ್ಜಿ ನೇತೃತ್ವದ ಅಧಿಕಾರಯುತ ಸಚಿವರ ಸಮಿತಿ, ಈರುಳ್ಳಿ ರಫ್ತು ನಿಷೇಧ ಹಿಂದಕ್ಕೆ ಪಡೆಯುವ ತೀರ್ಮಾನ ತೆಗೆದುಕೊಂಡಿದೆ ಎಂದು ವಾಣಿಜ್ಯ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಈರುಳ್ಳಿ ದರ ಪ್ರತಿ ಕೆಜಿಗೆ 70-80 ರೂಪಾಯಿಗಳಿಗೆ ಏರಿಕೆಯಾದ ಹಿನ್ನೆಲೆಯಲ್ಲಿ, ಕಳೆದ ವರ್ಷದ ಡಿಸೆಂಬರ್‌ನಲ್ಲಿ ಕೇಂದ್ರ ಸರಕಾರ ಈರುಳ್ಳಿ ರಫ್ತಿಗೆ ನಿಷೇಧ ಹೇರಿ ಆದೇಶ ಹೊರಡಿಸಿತ್ತು.

ಈರುಳ್ಳಿ ದರ ಮತ್ತೆ ಏರಿಕೆಯಾಗುವ ಭೀತಿಯಿಂದಾಗಿ ಸಚಿವರ ಸಮಿತಿ ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಂಡಿದ್ದು, ಕನಿಷ್ಠ ರಫ್ತು ದರ ಪ್ರತಿ ಟನ್‌ಗೆ 600 ಡಾಲರ್‌ಗಳಿಗೆ ನಿಗದಿಪಡಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಇವನ್ನೂ ಓದಿ