2ಜಿ ತರಂಗಾಂತರ ಹಂಚಿಕೆ ಹಗರಣದಲ್ಲಿ ಭಾಗಿಯಾದ ಶಂಕೆಗಳಿರುವ ಕೆಲ ಖಾಸಗಿ ಟೆಲಿಕಾಂ ಕಂಪೆನಿಗಳ ಅಧಿಕಾರಿಗಳನ್ನು ಸಿಬಿಐ ವಿಚಾರಣೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಸಿಬಿಐ ಅಧಿಕಾರಿಗಳು ಮಾರ್ಚ್ 31 ರೊಳಗೆ ಆರೋಪ ಪಟ್ಟಿಯನ್ನು ದಾಖಲಿಸುವ ಹಿನ್ನೆಲೆಯಲ್ಲಿ, 2ಜಿ ತರಂಗಾಂತರ ಹಂಚಿಕೆಯಲ್ಲಿ ಲಾಭ ಪಡೆದ ಕಂಪೆನಿಗಳ ಮುಖ್ಯಸ್ಥರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಸಿಬಿಐ ವಕ್ತಾರರು ತಿಳಿಸಿದ್ದಾರೆ.
ರಿಲಯನ್ಸ್ ಕಮ್ಯೂನಿಕೇಶನ್ಸ್ ಮತ್ತು ಟಾಟಾ ಇಂಡಿಕಾಂ ಸೇರಿದಂತೆ ಇತರ ಟೆಲಿಕಾಂ ಕಂಪೆನಿಗಳ ಅಧಿಕಾರಿಗಳು, ಸಿಬಿಐ ಅಧಿಕಾರಿಗಳ ವಿಚಾರಣೆಗೆ ಸಹಕರಿಸಿದ್ದಾರೆ ಎಂದು ಸಿಬಿಐ ಮೂಲಗಳು ತಿಳಿಸಿವೆ.
2ಜಿ ಹಗರಣದ ತನಿಖೆಯ ಮೇಲ್ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯ ವಹಿಸಿಕೊಂಡಿದ್ದು, ಮಾರ್ಚ್ 31ರೊಳಗೆ 2ಜಿ ಹಗರಣದ ಆರೋಪ ಪಟ್ಟಿಯನ್ನು ದಾಖಲಿಸುವಂತೆ ಆದೇಶಿಸಿದೆ.
2ಜಿ ತರಂಗಾಂತರ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಟೆಲಿಕಾಂ ಸಚಿವ ಎ.ರಾಜ, ಖಾಸಗಿ ಕಾರ್ಯದರ್ಶಿ ಆರ್.ಕೆ. ಚಾಂಡೋಲಿಯಾ, ಟೆಲಿಕಾಂ ಕಾರ್ಯದರ್ಶಿ ಸಿದ್ಧಾರ್ಥ ಬೆಹೂರಾ ಮತ್ತು ಡಿಬಿ ಲಿಯಲ್ಟಿ ಮುಖ್ಯಸ್ಥ ಶಾಹೀದ್ ಬಲ್ವಾ ಅವರನ್ನು ಈಗಾಗಲೇ ಬಂಧಿಸಲಾಗಿದೆ.