2ಜಿ ತರಂಗಾಂತರಗಳ ಹಂಚಿಕೆಯಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಮಾಜಿ ಟೆಲಿಕಾಂ ಸಚಿವ ಎ.ರಾಜಾ ಮತ್ತು ಅವರ ಸಹಚರರ ವಿರುದ್ಧ, ಪ್ರಸಕ್ತ ವಾರದಲ್ಲಿ ಎಫ್‌ಐಆರ್ ದಾಖಲಿಸುವ ಸಾಧ್ಯತೆಗಳಿವೆ ಎಂದು ಸಿಬಿಐ ಮೂಲಗಳು ತಿಳಿಸಿವೆ.
2ಜಿ ತರಂಗಾಂತರ ಹಂಚಿಕೆ ಅವ್ಯವಹಾರಗಳಲ್ಲಿ ಭಾಗಿಯಾದವರ ವಿರುದ್ಧ ಪ್ರಥಮ ಮಾಹಿತಿ ವರದಿಯನ್ನು ಸಲ್ಲಿಸಲಾಗುತ್ತಿದೆ.ಆದರೆ, ಟ್ರಾಯ್ ಸಂಸ್ಥೆ ವರದಿಯನ್ನು ಸಿದ್ಧಪಡಿಸುತ್ತಿರುವುದರಿಂದ ಸರಕಾರದ ಬೊಕ್ಕಸದ ನಷ್ಟ ಕುರಿತಂತೆ ವರದಿಯಲ್ಲಿ ಸೇರ್ಪಡೆಗೊಳಿಸಲಾಗಿಲ್ಲ.ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ 2007-08ರ ಅವಧಿಯ 2ಜಿ ತರಂಗಾಂತರ ಹಂಚಿಕೆಯಲ್ಲಿ ಮಾಜಿ ಟೆಲಿಕಾಂ ಸಚಿವ ಎ.ರಾಜಾ ನಡೆಸಿರುವ ಅವ್ಯವಹಾರಗಳ ಕುರಿತಂತೆ, ಎಫ್‌ಐಆರ್‌ನಲ್ಲಿ ಸಂಪೂರ್ಣ ವರದಿ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ವಿವರಣೆ ನೀಡಿದ್ದಾರೆ.
ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಒಪಿ ಸೈಯಾನಿಯವರಿಗೆ ಎಫ್‌ಐಆರ್ ವರದಿ ಸಲ್ಲಿಸಲಾಗುತ್ತದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.
ತಮಿಳುನಾಡು ರಾಜ್ಯದಲ್ಲಿ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆ ಸಂದರ್ಭದಲ್ಲಿ, ಅಡಳಿತ ಪಕ್ಷದ ಸದಸ್ಯರಾದ ಮಾಜಿ ಟೆಲಿಕಾಂ ಸಚಿವ ಎ.ರಾಜಾ ವಿರುದ್ಧ ಎಫ್‌ಐಆರ್ ದಾಖಲಾಗುತ್ತಿರುವುದು ಡಿಎಂಕೆ ಪಕ್ಷಕ್ಕೆ ನುಂಗಲಾರದ ತುತ್ತಾಗಿ ಪರಿಣಣಿಸಿದೆ.