ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಿದೇಶಿ ವಿನಿಮಯ > ಡಾಲರ್‌ ಎದುರಿಗೆ ರೂಪಾಯಿ ಮೌಲ್ಯ ಹೆಚ್ಚಳ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಡಾಲರ್‌ ಎದುರಿಗೆ ರೂಪಾಯಿ ಮೌಲ್ಯ ಹೆಚ್ಚಳ
PTI
ಏಷ್ಯಾ ಶೇರುಪೇಟೆಗಳ ಏರಿಕೆಯ ಮಧ್ಯೆಯು ರಫ್ತು ವಹಿವಾಟುದಾರರು ಡಾಲರ್‌ಗಳ ಮಾರಾಟದಲ್ಲಿ ತೊಡಗಿದ್ದರಿಂದ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 27 ಪೈಸೆ ಹೆಚ್ಚಳವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ ರೂಪಾಯಿ ಮೌಲ್ಯ ಪ್ರತಿ ಡಾಲರ್‌ಗೆ 48.18ಕ್ಕೆ ತಲುಪಿತ್ತು. ಆದರೆ ಸೋಮವಾರದ ಆರಂಭಿಕ ವಹಿವಾಟಿನಲ್ಲಿ ರೂಪಾಯಿ ಡಾಲರ್‌ ಎದುರಿಗೆ 27 ಪೈಸೆ ಹೆಚ್ಚಳವಾಗಿ 48.45/46 ರೂಗಳಿಗೆ ತಲುಪಿದೆ.

ದೇಶಿಯ ಶೇರುಪೇಟೆಯ ವಹಿವವಾಟಿನಲ್ಲಿ ಚೇತರಿಕೆ ಕಂಡಿದ್ದರಿಂದ ಬ್ಯಾಂಕ್‌ಗಳು ಹಾಗೂ ರಫ್ತು ವಹಿವಾಟುದಾರರು ಡಾಲರ್‌ಗಳ ಮಾರಾಟದಲ್ಲಿ ತೊಡಗಿದ್ದರಿಂದ ರೂಪಾಯಿ ಮೌಲ್ಯ ಏರಿಕೆಗೆ ಕಾರಣವಾಗಿದೆ ಎಂದು ಡೀಲರ್‌ಗಳು ತಿಳಿಸಿದ್ದಾರೆ.

ಏಷ್ಯಾ ಮಾರುಕಟ್ಟೆಯಲ್ಲಿ ಹಾಂಗ್‌ಕಾಂಗ್‌ನ ಹ್ಯಾಂಗ್‌ ಸೆಂಗ್ ಶೇ.3.15 ರಷ್ಟು ಹಾಗೂ ಜಪಾನ್‌ನ ನಿಕೈ ಶೇ.5.31ರಷ್ಟು ಆರಂಭಿಕ ವಹಿವಾಟಿನಲ್ಲಿ ಏರಿಕೆ ಕಂಡಿವೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ
ಡಾಲರ್‌ಗಳ ಮಾರಾಟದಿಂದ ರೂಪಾಯಿ ಮೌಲ್ಯ ಏರಿಕೆ
ಡಾಲರ್ ಎದುರು ರೂಪಾಯಿ ಮೌಲ್ಯ ಏರಿಕೆ
ಡಾಲರ್ ಎದುರು ರೂಪಾಯಿ ಮೌಲ್ಯ ಏರಿಕೆ
ಡಾಲರ್ ಎದುರು ರೂಪಾಯಿ ಸ್ಥಿರ
ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ