ಏಷ್ಯಾ ಶೇರುಪೇಟೆಗಳ ಚೇತರಿಕೆಯ ಮಧ್ಯೆಯು ರಫ್ತು ವಹಿವಾಟುದಾರರು ಡಾಲರ್ ಮಾರಾಟದಲ್ಲಿ ತೊಡಗಿದ್ದರಿಂದ ಬುಧವಾರದ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯ 13 ಪೈಸೆ ಏರಿಕೆ ಕಂಡಿದೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ ಪ್ರತಿ ಡಾಲರ್‌ಗೆ 48.34/35 ರೂ.ಗಳಿಗೆ ತಲುಪಿತ್ತು. ಿಂದು ಮತ್ತೆ 13 ಪೈಸೆ ಏರಿಕೆಯಾಗಿ ಪ್ರತಿ ಡಾಲರ್‌ಗೆ 48.47/48 ರೂಪಾಯಿಗಳಿಗೆ ತಲುಪಿದೆ.
ಸಾಗರೋತ್ತರ ವಹಿವಾಟಿನಲ್ಲಿ ಡಾಲರ್ ಮೌಲ್ಯ ದುರ್ಬಲಗೊಂಡಿದ್ದರಿಂದ ರೂಪಾಯಿ ಮೌಲ್ಯ ಏರಿಕೆಗೆ ಕಾರಣವಾಗಿದೆ ಎಂದು ವಿದೇಶಿ ವಿನಿಮಯ ಮಾರುಕಟ್ಟೆಯ ಮೂಲಗಳು ತಿಳಿಸಿವೆ. |