ಏಷ್ಯಾ ಕರೆನ್ಸಿಗಳ ಬಲಹೀನತೆಯ ಮಧ್ಯೆ ಸಾರ್ವಜನಿಕ ಕ್ಷೇತ್ರದ ಬ್ಯಾಂಕ್‌ಗಳು ಮತ್ತು ಅಮುದುದಾರರಿಂದ ಡಾಲರ್ ಬೇಡಿಕೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಏಳು ಪೈಸೆ ಕುಸಿತ ಕಂಡಿದೆ.ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ ಏರಿಕೆ ಕಂಡು ಪ್ರತಿ ಡಾಲರ್‌ಗೆ 48.66ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಏಳು ಪೈಸೆ ಕುಸಿತಗೊಂಡಿರುವುದರಿಂದ 48.59/60 ರೂಪಾಯಿಗಳಿಗೆ ತಲುಪಿದೆ.ಸಾರ್ವಜನಿಕ ಕ್ಷೇತ್ರದ ಬ್ಯಾಂಕ್‌ಗಳಿಂದ ಹಾಗೂ ಅಮುದುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿದೆ ಎಂದು ಡೀಲರ್‌ಗಳು ತಿಳಿಸಿದ್ದಾರೆ.ಶೇರುಪೇಟೆಯ ವಹಿವಾಟಿನಲ್ಲಿ ಚೇತರಿಕೆ ಕಂಡುಬಂದಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ. |