ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಸೆನ್ಸೆಕ್ಸ್: ಚೇತರಿಕೆ ಕಂಡ ಸಂವೇದಿ ಸೂಚ್ಯಂಕ (Sensex | Foreign funds | Nifty | Reliance Industries)
Bookmark and Share Feedback Print
 
ಶೇರುಪೇಟೆಯಲ್ಲಿ ಶೇರುಖರೀದಿಯಲ್ಲಿ ಹೆಚ್ಚಳ ಹಾಗೂ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳದಿಂದಾಗಿ ಇಂದಿನ ಆರಂಭಿಕ ವಹಿವಾಟಿನಲ್ಲಿ 82 ಪಾಯಿಂಟ್‌ಗಳ ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಬಿಎಸ್‌ಇ-30 ಸೂಚ್ಯಂಕ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 191.57 ಅಂಕಗಳಿಗೆ ಇಳಿಕೆ ಕಂಡಿತ್ತು. ಆದರೆ, ಇಂದಿನ ಆರಂಭಿಕ ವಹಿವಾಟಿನಲ್ಲಿ 81.97 ಪಾಯಿಂಟ್‌ಗಳಿಗೆ ಏರಿಕೆ ಕಂಡು 17,591.30 ಅಂಕಗಳಿಗೆ ತಲುಪಿದೆ.

ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ 23.05 ಪಾಯಿಂಟ್‌ಗಳ ಏರಿಕೆ ಕಂಡು 5,274.45 ಅಂಕಗಳಿಗೆ ತಲುಪಿದೆ.

ವಾಹನೋದ್ಯಮ ಕ್ಷೇತ್ರದ ಶೇರುಗಳಲ್ಲಿ ಟಾಟಾ ಮೋಟಾರ್ಸ್ ಶೇ.1.51ರಷ್ಟು ಏರಿಕೆ ಕಂಡಿದ್ದು,ಹೀರೋಹೊಂಡಾ ಶೇ.0.75ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ರಿಲಯನ್ಸ್ ಇಂಡಸ್ಟ್ರೀಸ್, ಒಎನ್‌ಜಿಸಿ, ಲಾರ್ಸನ್ ಆಂಡ್ ಟೌಬ್ರೋ, ಟಾಟಾ ಪವರ್ ಶೇರುಗಳು ಚೇತರಿಕೆ ಕಂಡಿವೆ.
ಸಂಬಂಧಿತ ಮಾಹಿತಿ ಹುಡುಕಿ