ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಸೆನ್ಸೆಕ್ಸ್: ಮಾಸಾಂತ್ಯಕ್ಕೆ ಚೇತರಿಕೆ ಕಂಡ ಶೇರುಪೇಟೆ (Sensex | Nifty | Reliance Industries | Maruti Suzuki)
Bookmark and Share Feedback Print
 
ಶೇರುಪೇಟೆಯ ಇಂದಿನ ಆರಂಭಿಕ ವಹಿವಾಟಿನಲ್ಲಿ ಚೇತರಿಕೆ ಕಂಡಿದ್ದರಿಂದ, ಸೂಚ್ಯಂಕ 13 ಪಾಯಿಂಟ್‌ಗಳ ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಬಿಎಸ್‌ಇ-30 ಸೂಚ್ಯಂಕ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 120.24 ಪಾಯಿಂಟ್‌ಗಳ ಇಳಿಕೆ ಕಂಡಿತ್ತು. ಆದರೆ, ಇಂದಿನ ಆರಂಭಿಕ ವಹಿವಾಟಿನಲ್ಲಿ ವಹಿವಾಟು ಚೇತರಿಕೆಯಿಂದಾಗಿ 12.77 ಪಾಯಿಂಟ್‌ಗಳ ಏರಿಕೆ ಕಂಡು 17,970.14 ಅಂಕಗಳಿಗೆ ತಲುಪಿದೆ.

ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ವಹಿವಾಟಿನಲ್ಲಿ 4.05 ಪಾಯಿಂಟ್‌ಗಳ ಏರಿಕೆ ಕಂಡು 5,401.60 ಪಾಯಿಂಟ್‌ಗಳಿಗೆ ತಲುಪಿದೆ.

ರಿಲಯನ್ಸ್ ಇಂಡಸ್ಟ್ರೀಸ್, ಮಾರುತಿ ಸುಝುಕಿ, ಟಾಟಾ ಸ್ಟೀಲ್, ಲಾರ್ಸನ್‌ ಆಂಡ್ ಟೌಬ್ರೋ, ಎಚ್‌ಡಿಎಫ್‌ಸಿ ಲಿಮಿಟೆಡ್, ಸಿಪ್ಲಾ ಶೇರುಗಳು ಮಾರುಕಟ್ಟೆಯಲ್ಲಿ ಚೇತರಿಕೆ ಕಂಡಿವೆ.
ಸಂಬಂಧಿತ ಮಾಹಿತಿ ಹುಡುಕಿ