ಏಷ್ಯಾ ಮಾರುಕಟ್ಟೆಗಳ ಸ್ಥಿರ ವಹಿವಾಟಿನ ಮಧ್ಯೆಯು, ಶೇರುಗಳ ಖರೀದಿಯ ಭರಾಟೆ ಮುಂದುವರಿದ ಹಿನ್ನೆಲೆಯಲ್ಲಿ, ಇಂದಿನ ಆರಂಭಿಕ ವಹಿವಾಟಿನಲ್ಲಿ ಸೂಚ್ಯಂಕ 115 ಪಾಯಿಂಟ್‌ಗಳ ಏರಿಕೆ ಕಂಡಿದೆ.
ಬಿಎಸ್‌ಇ-30 ಸೂಚ್ಯಂಕ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 112.78 ಪಾಯಿಂಟ್‌ಗಳ ಏರಿಕೆ ಕಂಡಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ 115 ಪಾಯಿಂಟ್‌ಗಳ ಏರಿಕೆ ಕಂಡು 20,184.84 ಅಂಕಗಳಿಗೆ ತಲುಪಿದೆ.
ಅದರಂತೆ ,ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಆರಂಭಿಕ ವಹಿವಾಟಿನಲ್ಲಿ 28.35ಪಾಯಿಂಟ್‌ಗಳ ಏರಿಕೆ ಕಂಡು 6058.30 ಅಂಕಗಳಿಗೆ ತಲುಪಿದೆ.
ಏಷ್ಯಾದ ಇತರ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ, ದೇಶಿಯ ಮಾರುಕಟ್ಟೆಯ ವಹಿವಾಟಿನಲ್ಲಿ ಏರಿಕೆಯಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಜಪಾನ್‌ನ ಮಾರುಕಟ್ಟೆ ನಿಕ್ಕಿ ಕೂಡಾ, ಆರಂಭಿಕ ವಹಿವಾಟಿನಲ್ಲಿ ಶೇ.0.76ರಷ್ಟು ಏರಿಕೆ ಕಂಡಿದೆ.