ಶೇರುಪೇಟೆಯ ಇಂದಿನ ಆರಂಭಿಕ ವಹಿವಾಟಿನಲ್ಲಿ, ಶೇರುಸೂಚ್ಯಂಕ 67 ಪಾಯಿಂಟ್‌ಗಳ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಬಿಎಸ್‌ಇ-30 ಸೂಚ್ಯಂಕ ಕಳೆದ ಮೂರು ದಿನಗಳ ವಹಿವಾಟಿನಲ್ಲಿ 519 ಪಾಯಿಂಟ್‌ಗಳನ್ನು ಸಂಗ್ರಹಿಸಿತ್ತು. ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ 67.79 ಪಾಯಿಂಟ್‌ಗಳ ಇಳಿಕೆ ಕಂಡು 20,407.94 ಅಂಕಗಳಿಗೆ ತಲುಪಿತ್ತು.
ತೈಲ, ರಿಯಲ್ಟಿ, ಮಾಹಿತಿ ತಂತ್ರಜ್ಞಾನ ಮತ್ತು ಬ್ಯಾಂಕಿಂಗ್ ಕ್ಷೇತ್ರಗಳ ಶೇರುಗಳ ಮಾರಟದಲ್ಲಿ ಹೆಚ್ಚಳವಾಗಿದ್ದರಿಂದ,ಸೂಚ್ಯಂಕ ಕುಸಿತಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 41.40 ಪಾಯಿಂಟ್‌ಗಳ ಇಳಿಕೆ ಕಂಡು 6,118.45 ಅಂಕಗಳಿಗೆ ತಲುಪಿದೆ.