ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಕೊಂಚ ಇಳಿಕೆ ಕಂಡ ಷೇರು ಮಾರುಕಟ್ಟೆ (Bombay Stock Exchange | Sensex | Nifty)
Bookmark and Share Feedback Print
 
ಮುಂಬೈ ಷೇರು ಮಾರುಕಟ್ಟೆ ಸೂಚ್ಯಂಕ ದಿನದಂತ್ಯದ ವಹಿವಾಟಿನಲ್ಲಿ 94 ಪಾಯಿಂಟ್ ಇಳಿಕೆ ಕಂಡಿದೆ.

ಬಿಎಸ್ಇ 30 ಷೇರು ಸೂಚ್ಯಂಕ 94.72 ಪಾಯಿಂಟ್ ಅಂದರೆ ಶೇ.0.47ರಷ್ಟು ಇಳಿಕೆ ಕಂಡು 20,165.86ಕ್ಕೆ ತಲುಪಿದೆ.

ರಾಷ್ಟ್ರೀಯ ಷೇರು ಮಾರುಕಟ್ಟೆ ಸೂಚ್ಯಂಕ ನಿಫ್ಟಿ ಶೇ.0.58ರಷ್ಟು ಇಳಿಕೆ ಕಂಡು 6,066.05ಕ್ಕೆ ತಲುಪಿದೆ.

ಇಳಿಕೆ ಕಂಡ ಪ್ರಮುಖ ಷೇರುಗಳ ಪೈಕಿ, ವಿಪ್ರೋ ಷೇರು ಶೇ.4.54ರಷ್ಟು ಇಳಿಕೆ ಕಂಡರೆ, ಸ್ಟೆರ್ಲೈಟ್ ಇಂಡಸ್ಟ್ರೀಸ್ ಶೇ.2.58, ಜಯಪ್ರಕಾಶ್ ಅಸೋಸಿಯೇಟ್ಸ್ ಶೇ.2.37, ರಿಲಯನ್ಸ್ ಕಮ್ಯುನಿಕೇಷನ್ಸ್ ಶೇ.0.51, ಐಸಿಐಸಿಐ ಬ್ಯಾಂಕ್ ಶೇ.0.23ರಷ್ಟು ಇಳಿಕೆ ಕಂಡಿದೆ.

ಹಾಂಗ್‌ಕಾಂಗ್‌ನ ಹ್ಯಾಂಗ್‌ಸೆಂಗ್ ಮಾರುಕಟ್ಟೆ ಶೇ.0.56ರಷ್ಟು ಕುಸಿದಿದೆ. ಜಪಾನಿನ ನಿಕ್ಕಿ ಷೇರು ಸೂಚ್ಯಂಕ ಶೇ.0.54ರಷ್ಟು ಇಳಿದಿದೆ. ಶಾಂಘೈ ಕಾಂಪೋಸಿಟ್ ಸೂಚ್ಯಂಕ ಶೇ.0.28ರಷ್ಟು ಇಳಿಕೆ ದಾಖಲಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಷೇರುಪೇಟೆ, ಬಿಎಸ್ಇ, ನಿಫ್ಟಿ