ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಸೆನ್ಸೆಕ್ಸ್: ದುರ್ಬಲ ವಹಿವಾಟಿನಿಂದ ಶೇರುಪೇಟೆ ಕುಸಿತ (Sensex | Asian region | Profit-booking | Nifty)
Bookmark and Share Feedback Print
 
ಏಷ್ಯಾ ಶೇರುಪೇಟೆಗಳ ಮಿಶ್ರವಹಿವಾಟಿನಿಂದಾಗಿ ಹೂಡಿಕೆದಾರರು ಆತಂಕಗೊಂಡಿದ್ದರಿಂದ, ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 55 ಪಾಯಿಂಟ್‌ಗಳ ಕುಸಿತ ಕಂಡಿದೆ.

ಬಿಎಸ್‌ಇ 30 ಸೂಚ್ಯಂಕ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 137.26 ಪಾಯಿಂಟ್‌ಗಳ ಏರಿಕೆ ಕಂಡಿತ್ತು. ಆದರೆ, ಇಂದಿನ ಆರಂಭಿಕ ವಹಿವಾಟಿನಲ್ಲಿ 54.92 ಪಾಯಿಂಟ್‌ಗಳ ಕುಸಿತ ಕಂಡು 20,248.20 ಅಂಕಗಳಿಗೆ ತಲುಪಿದೆ.

ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 15.20 ಪಾಯಿಂಟ್‌ಗಳ ಇಳಿಕೆ ಕಂಡು 6,090.60 ಅಂಕಗಳಿಗೆ ತಲುಪಿದೆ.

ಏಷ್ಯಾ ಶೇರುಪೇಟೆಗಳ ಮಿಶ್ರವಹಿವಾಟಿನಿಂದಾಗಿ ಹೂಡಿಕೆದಾರರು ಕಾದು ನೋಡುವ ತಂತ್ರ ಅನುಸರಿಸಿದ್ದರಿಂದ, ಶೇರುಪೇಟೆಯಲ್ಲಿ ಶೇರುಗಳ ಖರೀದಿಯ ಭರಾಟೆ ಮಂದವಾಗಿದೆ ಎಂದು ಮಾರುಕಟ್ಟೆಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಮಾರುಕಟ್ಟೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.16ರಷ್ಟು ಏರಿಕೆಯಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಜಪಾನ್‌ನ ನಿಕೈ ಮಾರುಕಟ್ಟೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.16ರಷ್ಟು ಏರಿಕೆಯಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಅದನ್ನು ಹೊರತುಪಡಿಸಿ, ಅಮೆರಿಕದ ಡೊ ಜೋನ್ಸ್ ಮಾರುಕಟ್ಟೆ ವಹಿವಾಟಿನ ಮುಕ್ತಾಯಕ್ಕೆ ಶೇ.0.28ರಷ್ಟು ಏರಿಕೆ ಕಂಡಿದೆ.
ಸಂಬಂಧಿತ ಮಾಹಿತಿ ಹುಡುಕಿ