ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಸೆನ್ಸೆಕ್ಸ್: ದುರ್ಬಲ ವಹಿವಾಟಿನಿಂದ ಸೂಚ್ಯಂಕದಲ್ಲಿ ಭಾರಿ ಕುಸಿತ (Sensex | Nifty | NTPC | Tech Mahindra | Reliance Industries)
ಸೆನ್ಸೆಕ್ಸ್: ದುರ್ಬಲ ವಹಿವಾಟಿನಿಂದ ಸೂಚ್ಯಂಕದಲ್ಲಿ ಭಾರಿ ಕುಸಿತ
ಮುಂಬೈ, ಬುಧವಾರ, 27 ಅಕ್ಟೋಬರ್ 2010( 18:21 IST )
ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟು ಹಾಗೂ ಮಾಸಾಂತ್ಯದ ಹಿನ್ನೆಲೆಯಲ್ಲಿ ಹೂಡಿಕೆದಾರರು ಶೇರುಗಳ ಖರೀದಿಯಿಂದ ದೂರವಾಗಿದ್ದರಿಂದ, ವಹಿವಾಟಿನ ಮುಕ್ತಾಯಕ್ಕೆ ಸೂಚ್ಯಂಕ 216 ಪಾಯಿಂಟ್‌ಗಳ ಕುಸಿತ ಕಂಡಿದೆ.
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 82 ಪಾಯಂಟ್‌ಗಳ ಕುಸಿತ ಕಂಡ ಬಿಎಸ್‌ಇ-30 ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ ಮತ್ತೆ 216.02ಪಾಯಿಂಟ್‌ಗಳ ಇಳಿಕೆ ಕಂಡು 20,005.37 ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 69.35 ಪಾಯಿಂಟ್‌ಗಳ ಇಳಿಕೆ ಕಂಡು 6,012.65 ಅಂಕಗಳಿಗೆ ತಲುಪಿದೆ.
ಎನ್‌ಟಿಪಿಸಿ, ಟೆಕ್ ಮಹೀಂದ್ರಾ, ರಿಲಯನ್ಸ್ ಇಂಡಸ್ಟ್ರೀಸ್, ಇನ್ಫೋಸಿಸ್ ಟೆಕ್ನಾಲಾಜೀಸ್, ಐಸಿಐಸಿಐ ಬ್ಯಾಂಕ್ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ.