ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಸೆನ್ಸೆಕ್ಸ್: ಶೇರು ಖರೀದಿ ಭರಾಟೆಯಿಂದ ಸೂಚ್ಯಂಕ ಚೇತರಿಕೆ (Sensex | Tech | Auto | IT | Oil | Reliance industries | Asian markets)
ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಕುಸಿತ ಕಂಡಿದ್ದ ಶೇರುಪೇಟೆ, ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇರು ಖರೀದಿಗಳಲ್ಲಿ ಹೆಚ್ಚಳವಾಗಿದ್ದರಿಂದ ಸೂಚ್ಯಂಕ 114 ಪಾಯಿಂಟ್‌ಗಳ ಏರಿಕೆ ಕಂಡಿದೆ.
ಹಿಂದಿನ ಎರಡು ದಿನಗಳ ವಹಿವಾಟಿನಲ್ಲಿ 298ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ-30 ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 114.40 ಪಾಯಿಂಟ್‌ಗಳ ಏರಿಕೆ ಕಂಡು 20,119.77 ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಆರಂಭಿಕ ವಹಿವಾಟಿನಲ್ಲಿ 33.50 ಪಾಯಿಂಟ್‌ಗಳ ಏರಿಕೆ ಕಂಡು 6046.15 ಅಂಕಗಳಿಗೆ ತಲುಪಿದೆ.
ವಾಹನೋದ್ಯಮ, ತೈಲ, ಮಾಹಿತಿ ತಂತ್ರಜ್ಞಾನ ಮತ್ತು ಅನಿಲ ಕ್ಷೇತ್ರಗಳು ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಇನ್ಫೋಸಿಸ್ ಶೇರು ಖರೀದಿಗಳಲ್ಲಿ ಹೆಚ್ಚಳವಾಗಿದ್ದರಿಂದ, ಶೇರುಪೇಟೆ ವಹಿವಾಟಿನಲ್ಲಿ ಏರಿಕೆ ಕಂಡಿದೆ.
ಹಾಂಗ್‌ಕಾಂಗ್‌ನ ಹಾಂಗ್‌ಸಂಗ್ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.11ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.11ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.