ಇಂದಿನ ಆರಂಭಿಕ ವಹಿವಾಟಿನಲ್ಲಿ ಚೇತರಿಕೆ ಕಂಡಿದ್ದ ಶೇರುಪೇಟೆ, ವಹಿವಾಟಿನ ಮುಕ್ತಾಯಕ್ಕೆ 64 ಪಾಯಿಂಟ್‌ಗಳ ಇಳಿಕೆ ಕಂಡಿದೆ.
ಕಳೆದ ಎರಡು ದಿನಗಳ ವಹಿವಾಟಿನಲ್ಲಿ 298 ಪಾಯಿಂಟ್‌ಗಳ ಕುಸಿತ ಕಂಡ ಬಿಎಸ್‌ಇ ಸೂಚ್ಯಂಕ,ಇಂದಿನ ವಹಿವಾಟಿನ ಮುಕ್ತಾಯಕ್ಕೆ 64.33 ಪಾಯಿಂಟ್‌ಗಳ ಕುಸಿತ ಕಂಡು 19,941.04 ಅಂಕಗಳಿಗೆ ತಲುಪಿದೆ.
ಆದರೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ 24.95 ಪಾಯಿಂಟ್‌ಗಳ ಕುಸಿತ ಕಂಡು 5,987.70 ಅಂಕಗಳಿಗೆ ತಲುಪಿದೆ.
ರಿಲಯನ್ಸ್ ಇಂಡಸ್ಟ್ರೀಸ್, ಇನ್ಫೋಸಿಸ್ ಟೆಕ್ನಾಲಾಜೀಸ್, ಐಸಿಐಸಿಐ ಬ್ಯಾಂಕ್, ರಿಯಲ್ ಎಸ್ಟೇಟ್ ಶೇರುಗಳು ವಹಿವಾಟಿನಲ್ಲಿ ಭಾರಿ ಕುಸಿತ ಕಂಡಿವೆ.