ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಸೆನ್ಸೆಕ್ಸ್: ಮೂರು ದಿನಗಳ ನಂತರ ಚೇತರಿಕೆ ಕಂಡ ಸೂಚ್ಯಂಕ (Sensex | SAIL | ONGC | Hang Seng Index)
Bookmark and Share Feedback Print
 
ಸತತ ಮೂರು ದಿನಗಳ ವಹಿವಾಟಿನಲ್ಲಿ ಕುಸಿತ ಕಂಡ ಶೇರುಪೇಟೆ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 91 ಪಾಯಿಂಟ್‌ಗಳ ಏರಿಕೆ ಕಂಡಿದೆ.

ಮೂರು ದಿನಗಳ ವಹಿವಾಟಿನಲ್ಲಿ 362 ಪಾಯಿಂಟ್‌ಗಳ ಏರಿಕೆ ಕಂಡ ಬಿಎಸ್‌ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 91.30 ಪಾಯಿಂಟ್‌ಗಳ ಏರಿಕೆ ಕಂಡು 20,032.34 ಅಂಕಗಳಿಗೆ ತಲುಪಿದೆ.

ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ವಹಿವಾಟಿನ ಮುಕ್ತಾಯಕ್ಕೆ 30 ಪಾಯಿಂಟ್‌ಗಳ ಏರಿಕೆ ಕಂಡು 6,017.70 ಅಂಕಗಳಿಗೆ ತಲುಪಿದೆ.

ರಿಲಯನ್ಸ್ ಇಂಡಸ್ಟ್ರೀಸ್, ಐಸಿಐಸಿಐ ಬ್ಯಾಂಕ್, ಐಟಿಸಿ ಕ್ಷೇತ್ರದ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ. ಬ್ಯಾಂಕಿಂಗ್ ಕ್ಷೇತ್ರದ ಶೇರುಗಳು ವಹಿವಾಟಿನಲ್ಲಿ ಭಾರಿ ಚೇತರಿಕೆಯಾಗಿವೆ.ಎಫ್‌ಎಂಸಿಜಿ, ತೈಲ ಮತ್ತು ಅನಿಲ ಸೂಚ್ಯಂಕದಲ್ಲಿ ಏರಿಕೆಯಾಗಿವೆ.
ಸಂಬಂಧಿತ ಮಾಹಿತಿ ಹುಡುಕಿ