ರಿಲಯನ್ಸ್ ಇಂಡಸ್ಟ್ರೀಸ್ ತ್ರೈಮಾಸಿಕ ಫಲಿತಾಶ ಚೇತರಿಕೆಯ ಹಿನ್ನೆಲೆಯಲ್ಲಿ, ಇಂದಿನ ವಹಿವಾಟಿನಲ್ಲಿ ಶೇರುಪೇಟೆ ಸೂಚ್ಯಂಕ ಶೇ.1ರಷ್ಟು ಏರಿಕೆ ಕಂಡಿದೆ.
ಕಾರು ತಯಾರಿಕೆಯಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿರುವ ಮಾರುತಿ ಸುಝುಕಿ ಕಂಪೆನಿ, ಕರೆನ್ಸಿಗಳ ಏರಿಳಿಕೆ ಹಾಗೂ ಒಳವೆಚ್ಚ ಹೆಚ್ಚಳವಾದ ಹಿನ್ನೆಲೆಯಲ್ಲಿ, ತ್ರೈಮಾಸಿಕ ಫಲಿತಾಂಶದಲ್ಲಿ ಶೇ.3ರಷ್ಟು ಕುಸಿತ ಕಂಡಿದೆ.
ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.1.35ರಷ್ಟು ಏರಿಕೆ ಕಂಡು 20,302.44 ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.1.35ರಷ್ಟು ಏರಿಕೆ ಕಂಡು 6,093.55 ಅಂಕಗಳಿಗೆ ತಲುಪಿದೆ.
ರಿಲಯನ್ಸ್ ಇಂಡಸ್ಟ್ರೀಸ್, ಮೂರು ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ ತ್ರೈಮಾಸಿಕ ಫಲಿತಾಂಶದಲ್ಲಿ ಶೇ.2.7ರಷ್ಟು ಚೇತರಿಕೆ ಕಂಡಿದೆ.