ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರಗಳನ್ನು ಹೆಚ್ಚಿಸುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಹೂಡಿಕೆದಾರರು ವಹಿವಾಟಿನಿಂದ ದೂರವಾಗಿದ್ದರಿಂದ, ಶೇರುಪೇಟೆ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 36 ಪಾಯಿಂಟ್‌ಗಳ ಇಳಿಕೆ ಕಂಡಿದೆ.
ಕಳೆದ ಎರಡು ದಿನಗಳ ವಹಿವಾಟಿನಲ್ಲಿ 415 ಪಾಯಿಂಟ್‌ಗಳ ಏರಿಕೆ ಕಂಡ ಬಿಎಸ್‌ಇ-30 ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 36.77 ಪಾಯಿಂಟ್‌ಗಳ ಇಳಿಕೆ ಕಂಡು 20,318.86 ಅಂಕಗಳಿಗೆ ತಲುಪಿದೆ.
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಆರಂಭಿಕ ವಹಿವಾಟಿನಲ್ಲಿ 13.20 ಪಾಯಿಂಟ್‌ಗಳ ಕುಸಿತ ಕಂಡು 6,104.35 ಅಂಕಗಳಿಗೆ ತಲುಪಿದೆ.
ಭಾರತೀಯ ರಿಸರ್ವ್ ಬ್ಯಾಂಕ್, ಇಂದು ಆರ್ಥಿಕ ಪರಿಷ್ಕರಣೆ ಸಭೆ ನಡೆಸಲಿರುವ ಹಿನ್ನೆಲೆಯಲ್ಲಿ, ರೆಪೋ ದರಗಳಲ್ಲಿ ಏರಿಕೆ ಸಾಧ್ಯತೆಗಳಿಂದಾಗಿ, ಶೇರುಪೇಟೆ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.02ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಜಪಾನ್‌ನ ನಿಕೈ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.25ರಷ್ಟು ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.