ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಸೆನ್ಸೆಕ್ಸ್: ರೆಪೋ ದರಗಳ ಏರಿಕೆ,ಸೂಚ್ಯಂಕ ಇಳಿಕೆ (Sensex | BSE | NSE | Nifty | Consolidate | Traders)
Bookmark and Share Feedback Print
 
ಶೇರುಪೇಟೆಯ ವಹಿವಾಟಿನಲ್ಲಿ ಚೇತರಿಕೆ ಕಾಣದಿರುವ ಹಿನ್ನೆಲೆಯಲ್ಲಿ, ವಹಿವಾಟಿನ ಮುಕ್ತಾಯಕ್ಕೆ ಸೂಚ್ಯಂಕ 10 ಪಾಯಿಂಟ್‌ಗಳ ಕುಸಿತ ಕಂಡು ಅಂತ್ಯಗೊಂಡಿದೆ.

ಬಿಎಸ್‌ಇ-30 ಸೂಚ್ಯಂಕ, ವಹಿವಾಟಿನ ಮುಕ್ತಾಯಕ್ಕೆ 9.94 ಪಾಯಿಂಟ್‌ಗಳ ಏರಿಕೆ ಕಂಡು 20,345.69 ಅಂಕಗಳಿಗೆ ತಲುಪಿದೆ.

ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಅಲ್ಪ ಇಳಿಕೆ ಕಂಡು 6,119.00 ಅಂಕಗಳಿಗೆ ತಲುಪಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ಮತ್ತು ರಿವರ್ಸ್ ರೆಪೋ ದರಗಳಲ್ಲಿ 25 ಬೇಸಿಸ್ ಪಾಯಿಂಟ್‌ಗಳಷ್ಟು ಏರಿಕೆ ಘೋಷಿಸಿದ್ದರಿಂದ. ವಾಹನ ಗೃಹ ಮತ್ತು ಕಾರ್ಪೋರೇಟ್ ಸಾಲಗಳ ಬಡ್ಡಿ ದರಗಳಲ್ಲಿ ಏರಿಕೆಯಾಗಲಿರುವ ಆತಂಕಗಳಿಂದಾಗಿ ಹೂಡಿಕೆದಾರರು ಕಾದು ನೋಡುವ ತಂತ್ರವನ್ನು ಅನುಸರಿಸುತ್ತಿದ್ದಾರೆ.

ಬಿಎಸ್‌ಇ-ಮಿಡ್‌ಕ್ಯಾಪ್ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ ಶೇ.0.42ರಷ್ಟು ಏರಿಕೆ ಕಂಡಿದೆ. ಬಿಎಸ್‌ಇ ಸ್ಮಾಲ್‌ಕ್ಯಾಪ್ ಸೂಚ್ಯಂಕ ಕೂಡಾ ಶೇ.0.09ರಷ್ಟು ಚೇತರಿಕೆ ಕಂಡಿದೆ.
ಸಂಬಂಧಿತ ಮಾಹಿತಿ ಹುಡುಕಿ