ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಸೆನ್ಸೆಕ್ಸ್: ಶೇರುಗಳ ಖರೀದಿಯಿಂದ ಸೂಚ್ಯಂಕ ಚೇತರಿಕೆ (Sensex | Nifty | Bombay stock exchange)
Bookmark and Share Feedback Print
 
ಜಾಗತಿಕ ಮಾರುಕಟ್ಟೆಗಳ ಚೇತರಿಕೆಯಿಂದಾಗಿ, ಪ್ರಮುಖ ಕಂಪೆನಿಗಳ ಶೇರು ಖರೀದಿಯಲ್ಲಿ ಏರಿಕೆಯಾಗಿದ್ದರಿಂದ, ಇಂದಿನ ಆರಂಭಿಕ ವಹಿವಾಟಿನಲ್ಲಿ ಸೂಚ್ಯಂಕ 175 ಪಾಯಿಂಟ್‌ಗಳ ಏರಿಕೆ ಕಂಡಿದೆ.

ಬಿಎಸ್‌ಇ-30 ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 175.23 ಪಾಯಿಂಟ್‌ಗಳ ಏರಿಕೆ ಕಂಡು 20,520.92 ಅಂಕಗಳಿಗೆ ತಲುಪಿದೆ.ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಆರ್‌ಬಿಐ ರೆಪೋ ದರಗಳಲ್ಲಿ ಏರಿಕೆ ಘೋಷಿಸಿದ್ದರಿಂದ 10 ಪಾಯಿಂಟ್‌ಗಳ ಕುಸಿತ ಕಂಡಿತ್ತು.

ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 48.95 ಪಾಯಿಂಟ್‌ಗಳ ಏರಿಕೆ ಕಂಡು 6,167.95 ಅಂಕಗಳಿಗೆ ತಲುಪಿದೆ.

ಜಾಗತಿಕ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ, ದೇಶಿಯ ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳದ ಹಿನ್ನೆಲೆಯಲ್ಲಿ ಶೇರುಪೇಟೆ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಭಾರತೀಯ ರಿಸರ್ವ್ ಬ್ಯಾಂಕ್ ಘೋಷಿಸಿದ ರೆಪೋ ದರಗಳ ಏರಿಕೆಯಿಂದ ವಹಿವಾಟಿಗೆ ಹೆಚ್ಚಿನ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎನ್ನುವ ನಿರೀಕ್ಷೆಗಳಿಂದಾಗಿ,ವಹಿವಾಟಿನಲ್ಲಿ ಚೇತರಿಕೆಯಾಗಿದೆ.

ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಮಾರುಕಟ್ಟೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.1.69ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಅಮೆರಿಕದ ಡೊ ಜೊನ್ಸ್ ಮಾರುಕಟ್ಟೆ ಇಂದಿನ ವಹಿವಾಟಿನ ಮುಕ್ತಾಯಕ್ಕೆ ಶೇ.ಶೇ.0.58ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಸೆನ್ಸೆಕ್ಸ್, ನಿಫ್ಟಿ, ಶೇರುಪೇಟೆ