ಉಕ್ಕು, ತೈಲ ಮತ್ತು ಅನಿಲ ಕ್ಷೇತ್ರಗಳ ಶೇರು ಖರೀದಿಯ ಭರಾಟೆಯಲ್ಲಿ ಏರಿಕೆಯಾಗಿದ್ದರಿಂದ, ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇರುಪೇಟೆ ಸೂಚ್ಯಂಕ 188 ಪಾಯಿಂಟ್‌ಗಳ ಏರಿಕೆ ಕಂಡಿದೆ.
ಬಿಎಸ್‌ಇ-30 ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 187.90 ಪಾಯಿಂಟ್‌ಗಳ ಏರಿಕೆ ಕಂಡು 20,653.64 ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 49.70 ಪಾಯಿಂಟ್‌ಗಳ ಏರಿಕೆ ಕಂಡು 6,210.20 ಅಂಕಗಳಿಗೆ ತಲುಪಿದೆ
ದೇಶಿಯ ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಒಳಹರಿವು ಹಾಗೂ ಕಾರ್ಪೋರೇಟ್ ಕಂಪೆನಿಗಳ ತ್ರೈಮಾಸಿಕ ಫಲಿತಾಂಶ ಚೇತರಿಕೆಯಿಂದಾಗಿ, ಶೇರುಪೇಟೆ ಸೂಚ್ಯಂಕ ಏರಿಕೆಗೆ ಕಾರಣವಾಗಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಮಾರುಕಟ್ಟೆ, ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.1.25ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಜಪಾನ್‌ನ ನಿಕೈ ಮಾರುಕಟ್ಟೆ, ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.2.24ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.