ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಕುಸಿತ ಕಂಡಿದ್ದ ಶೇರುಪೇಟೆ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇರುಗಳ ಖರೀದಿಯಿಂದಾಗಿ 70 ಪಾಯಿಂಟ್ ಚೇತರಿಕೆ ಕಂಡಿದೆ.
ವಾಹನೋದ್ಯಮ, ಉಕ್ಕು ಮತ್ತು ಎಫ್‌ಎಂಸಿಜಿ ಕ್ಷೇತ್ರದ ಶೇರುಗಳ ಖರೀದಿಯಲ್ಲಿ ಹೆಚ್ಚಳವಾಗಿದ್ದರಿಂದ, ಬಿಎಸ್‌ಇ-30 ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 69.82 ಪಾಯಿಂಟ್‌ಗಳ ಏರಿಕೆ ಕಂಡು 20,922.20 ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 18.50 ಪಾಯಿಂಟ್‌ಗಳ ಏರಿಕೆ ಕಂಡು 6,291.70 ಅಂಕಗಳಿಗೆ ತಲುಪಿದೆ.
ವಿದೇಶಿ ಬಂಡವಾಳದ ಒಳಹರಿವು ಹಾಗೂ ಹೂಡಿಕೆದಾರರಿಂದ ಶೇರುಗಳ ಖರೀದಿಯಲ್ಲಿ ಹೆಚ್ಚಳವಾಗಿದ್ದರಿಂದ, ಶೇರುಪೇಟೆ ಸೂಚ್ಯಂಕ ಚೇತರಿಕೆಯತ್ತ ಮುಂದುವರಿದಿದೆ ಎಂದು ಮಾರುಕಟ್ಟೆಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.