ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಹೂಡಿಕೆದಾರರ ನಿರಾಸಕ್ತಿ:ಶೇರುಪೇಟೆ ಸೂಚ್ಯಂಕ ಕುಸಿತ (Sensex | Opening trade | Nifty | Metals | IT)
Bookmark and Share Feedback Print
 
ಹೂಡಿಕೆದಾರರ ನಿರಾಸಕ್ತಿಯಿಂದಾಗಿ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇರುಪೇಟೆ ಸೂಚ್ಯಂಕ 43 ಪಾಯಿಂಟ್‌ಗಳ ಕುಸಿತ ಕಂಡಿದೆ.

ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 80.10 ಪಾಯಿಂಟ್‌ಗಳ ಏರಿಕೆ ಕಂಡ ಬಿಎಸ್‌ಇ-30 ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 42.85 ಪಾಯಿಂಟ್‌ಗಳ ಕುಸಿತ ಕಂಡು 20,889.03 ಅಂಕಗಳಿಗೆ ತಲುಪಿದೆ.

ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಆರಂಭಿಕ ವಹಿವಾಟಿನಲ್ಲಿ 19.05 ಪಾಯಿಂಟ್‌ಗಳ ಏರಿಕೆ ಕಂಡು 6,282.50 ಅಂಕಗಳಿಗೆ ತಲುಪಿದೆ.

ಭಾರ್ತಿ ಏರ್‌ಟೆಲ್ ಮತ್ತು ಸ್ಟೇಟ್‌ ಬ್ಯಾಂಕ್ ಇಂಡಿಯಾ ತ್ರೈಮಾಸಿಕ ಫಲಿತಾಂಶಗಳ ಕುಸಿತದಿಂದಾಗಿ, ಹೂಡಿಕೆದಾರರು ಶೇರುಗಳ ಮಾರಾಟದಲ್ಲಿ ತೊಡಗಿದ್ದರಿಂದ, ಶೇರುಪೇಟೆ ಕುಸಿತಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಹಣಕಾಸು ಕ್ಷೇತ್ರ, ಉಕ್ಕು, ಮಾಹಿತಿ ತಂತ್ರಜ್ಞಾನ ಮತ್ತು ಬಂಡವಾಳ ಕ್ಷೇತ್ರದ ಶೇರುಗಳ ವಹಿವಾಟಿನಲ್ಲಿ ಕುಸಿತವಾಗಿದ್ದರಿಂದ, ಶೇರುಪೇಟೆ ಸೂಚ್ಯಂಕ ಕುಸಿತವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ವಾಹನೋದ್ಯಮ ಕ್ಷೇತ್ರದ ಟಾಟಾ ಮೋಟಾರ್ಸ್ ತ್ರೈಮಾಸಿಕ ಅವಧಿಯ ನಿವ್ವಳ ಲಾಭದಲ್ಲಿ ಏರಿಕೆಯಾಗಿದ್ದರಿಂದ ಶೇರುಗಳ ವಹಿವಾಟಿನಲ್ಲಿ ಭಾರಿ ಏರಿಕೆಯಾಗಿದೆ.

ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಶೇರುಪೇಟೆ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.33ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗು ತಿಳಿಸಿವೆ.

ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.1 ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಅಮೆರಿಕದ ಡೊ ಜೊನ್ಸ್‌ ಶೇರುಪೇಟೆ, ವಹಿವಾಟಿನ ಮುಕ್ತಾಯಕ್ಕೆ ಶೇ.0.33ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ