ಪ್ರಮುಖ ಬ್ಲೂ ಚಿಪ್ ಕಂಪೆನಿಗಳ ತ್ರೈಮಾಸಿಕ ಫಲಿತಾಂಶ ಕುಸಿದ ಹಿನ್ನೆಲೆಯಲ್ಲಿ,ಶೇರುಪೇಟೆ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ 57 ಪಾಯಿಂಟ್‌ಗಳ ಏರಿಕೆ ಕಂಡಿದೆ.
ಬಿಎಸ್‌ಇ-30 ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 56.77 ಪಾಯಿಂಟ್‌ಗಳ ಕುಸಿತ ಕಂಡ ಸೂಚ್ಯಂಕ 20,875.71 ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ವಹಿವಾಟಿನ ಮುಕ್ತಾಯಕ್ಕೆ 25.85 ಪಾಯಿಂಟ್‌ಗಳ ಇಳಿಕೆ ಕಂಡು 6,275.70 ಅಂಕಗಳಿಗೆ ತಲುಪಿದೆ.
ಯುರೋಪ್ ಮಾರುಕಟ್ಟೆಗಳ ದುರ್ಬಲ ವಹಿವಾಟು ಹಾಗೂ ಏಷ್ಯಾ ಮಾರುಕಟ್ಟೆಗಳ ಮಿಶ್ರ ಫಲಿತಾಂಶಗಳಿಂದಾಗಿ ಶೇರುಪೇಟೆ ವಹಿವಾಟಿನಲ್ಲಿ ಕುಸಿತವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಟಾಟಾ ಮೋಟಾರ್ಸ್ ಇನ್ಫೋಸಿಸ್ ಟೆಕ್ನಾಲಾಜೀಸ್ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಶೇರು ದರಗಳಲ್ಲಿ ಇಳಿಕೆಯಾಗಿದೆ.