ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಸೆನ್ಸೆಕ್ಸ್: ಚೇತರಿಕೆ ಕಂಡ ಶೇರುಪೇಟೆ ಸೂಚ್ಯಂಕ (Sensex | Opening trade | Banking | Oil | Gas)
Bookmark and Share Feedback Print
 
ಶೇರುಪೇಟೆಯ ಇಂದಿನ ಆರಂಭಿಕ ವಹಿವಾಟಿನಲ್ಲಿ ಹಲವು ಕ್ಷೇತ್ರಗಳ ವಹಿವಾಟಿನಲ್ಲಿ ಚೇತರಿಕೆ ಕಂಡುಬಂದಿದ್ದರಿಂದ, ಸೂಚ್ಯಂಕ 60 ಪಾಯಿಂಟ್‌ಗಳ ಏರಿಕೆ ಕಂಡಿದೆ.

ಬ್ಯಾಂಕಿಂಗ್, ತೈಲ ಮತ್ತು ಅನಿಲ ಹಾಗೂ ಉಕ್ಕು ಕ್ಷೇತ್ರಗಳ ಶೇರುಗಳ ಖರೀದಿ ವಹಿವಾಟಿನಲ್ಲಿ ಭಾರಿ ಏರಿಕೆಯಾದ ಹಿನ್ನೆಲೆಯಲ್ಲಿ ಸೂಚ್ಯಂಕ ಏರಿಕೆ ಕಂಡಿದೆ.

ಹಿಂದಿನ ದಿನದ ವಹಿವಾಟಿನಲ್ಲಿ 56.77 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ-30 ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 60.24 ಪಾಯಿಂಟ್‌ಗಳ ಏರಿಕೆ ಕಂಡು 20,935.95 ಅಂಕಗಳಿಗೆ ತಲುಪಿದೆ.

ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ, ಇಂದಿನ ಆರಂಭಿಕ ವಹಿವಾಟಿನಲ್ಲಿ 17.00 ಪಾಯಿಂಟ್‌ಗಳ ಏರಿಕೆ ಕಂಡು 6,292.70 ಅಂಕಗಳಿಗೆ ತಲುಪಿದೆ.

ಸಾಗರೋತ್ತರ ಮಾರುಕಟ್ಟೆಗಳ ಸ್ಥಿರವಹಿವಾಟು ಹಾಗೂ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಶೇರುಪೇಟೆ ಚೇತರಿಸಿಕೊಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.29 ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.


ಜಪಾನ್‌ನ ನಿಕೈ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.39 ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಅಮೆರಿಕದ ಡೊ ಜೊನ್ಸ್ ಸೂಚ್ಯಂಕ, ವಹಿವಾಟಿನ ಮುಕ್ತಾಯಕ್ಕೆ ಶೇ.0.39 ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ