ಸತತ ಮೂರನೇ ದಿನವೂ ಕುಸಿತ ಕಂಡ ಶೇರುಪೇಟೆ ಸೂಚ್ಯಂಕ, ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟು ಹಾಗೂ ಶೇರುಗಳ ಮಾರಾಟದಿಂದಾಗಿ ಇಂದಿನ ಆರಂಭಿಕ ವಹಿವಾಟಿನಲ್ಲಿ 113 ಪಾಯಿಂಟ್‌ಗಳ ಕುಸಿತ ಕಂಡಿದೆ.
ಕಳೆದ ಎರಡು ದಿನಗಳ ವಹಿವಾಟಿನಲ್ಲಿ 343.39 ಪಾಯಿಂಟ್‌ಗಳ ಕುಸಿತ ಕಂಡ ಬಿಎಸ್‌ಇ-30 ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 113 ಪಾಯಿಂಟ್‌ಗಳ ಕುಸಿತ ಕಂಡು 20,475.75 ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ 30.80 ಪಾಯಿಂಟ್‌ಗಳ ಇಳಿಕೆ ಕಂಡು 6,163.45 ಅಂಕಗಳಿಗೆ ತಲುಪಿದೆ.
ಏಷ್ಯಾ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಶೇರುಪೇಟೆ ವಹಿವಾಟಿನಲ್ಲಿ ಕುಸಿತವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.