ಏಷ್ಯಾ ಮಾರುಕಟ್ಟೆಗಳ ಸ್ಥಿರ ವಹಿವಾಟು, ಕಾರ್ಪೋರೇಟ್ ಕಂಪೆನಿಗಳ ವಹಿವಾಟು ಚೇತರಿಕೆ ಮತ್ತು ಶೇರುಗಳ ಖರೀದಿಯಲ್ಲಿ ಹೆಚ್ಚಳವಾಗಿದ್ದರಿಂದ, ಶೇರುಪೇಟೆ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 170 ಪಾಯಿಂಟ್‌ಗಳ ಏರಿಕೆ ಕಂಡಿದೆ.
2ಜಿ ತರಂಗಾಂತರಗಳ ವಿವಾದದ ಹಿನ್ನೆಲೆಯಲ್ಲಿ ಮೂರು ದಿನಗಳ ವಹಿವಾಟಿನಲ್ಲಿ 345.20 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ-30 ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 170.53 ಪಾಯಿಂಟ್‌ಗಳ ಚೇತರಿಕೆ ಕಂಡು 19,755.97 ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ, 54.55 ಪಾಯಿಂಟ್‌ಗಳ ಏರಿಕೆ ಕಂಡು 5,944.85 ಅಂಕಗಳಿಗೆ ತಲುಪಿದೆ.
ಹಾಂಗ್‍ಕಾಂಗ್‌ನ ಹಾಂಗ್‌ಸೆಂಗ್ ಶೇರುಪೇಟೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.29ರಷ್ಟು ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಜಪಾನ್‌ನ ನಿಕೈ ಶೇರುಪೇಟೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.1.10ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.